ಆರ್ಥಿಕವಾಗಿ ದುರ್ಬಲ ವಿಭಾಗದ ಕೋಟಾ ನಿಯಮಗಳು ಮುಂದಿನ ವರ್ಷ ಬದಲಾಗುತ್ತವೆ: ಕೇಂದ್ರ

Update: 2022-01-02 05:57 GMT

ಹೊಸದಿಲ್ಲಿ: ದೇಶಾದ್ಯಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ಇಡಬ್ಲ್ಯೂಎಸ್ (ಆರ್ಥಿಕವಾಗಿ ದುರ್ಬಲ ವಿಭಾಗ) ಮೀಸಲಾತಿ ಫಲಾನುಭವಿಗಳನ್ನು ಗುರುತಿಸಲು ಅಸ್ತಿತ್ವದಲ್ಲಿರುವ ಮಾನದಂಡಗಳನ್ನು ಈ ಶೈಕ್ಷಣಿಕ ವರ್ಷಕ್ಕೆ ಉಳಿಸಿಕೊಳ್ಳಲಾಗುವುದು ಎಂದು ಸರಕಾರ ಶುಕ್ರವಾರ ಸಲ್ಲಿಸಿದ ಅಫಿಡವಿಟ್‌ನಲ್ಲಿ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.  ಅದರ ವಿವರಗಳು ಇಂದು ಬೆಳಿಗ್ಗೆ ಲಭ್ಯವಾಗಿದೆ ಎಂದು NDTV ವರದಿ ಮಾಡಿದೆ.

ನೀಟ್ (ನ್ಯಾಷನಲ್ ಎಲಿಜಿಬಿಲಿಟಿ ಕಮ್ ಎಂಟ್ರೆನ್ಸ್ ಟೆಸ್ಟ್) ವಿದ್ಯಾರ್ಥಿಗಳಿಗೆ ಪ್ರವೇಶ ಮತ್ತು ಕಾಲೇಜುಗಳ ಹಂಚಿಕೆ ನಡೆಯುತ್ತಿರುವ ಈ ಸಮಯದಲ್ಲಿ ನಿಯಮಗಳ ಬದಲಾವಣೆಯು ತೊಡಕುಗಳಿಗೆ ಕಾರಣವಾಗುತ್ತದೆ ಎಂದು ಸರಕಾರ ಹೇಳಿದೆ.

ಮುಂದಿನ ಶೈಕ್ಷಣಿಕ ವರ್ಷದಿಂದ ಆರ್ಥಿಕವಾಗಿ ದುರ್ಬಲ ವಿಭಾಗದ  ನಿಯಮ ಪರಿಷ್ಕರಣೆಗಳನ್ನು ಅನ್ವಯಿಸಬಹುದು ಎಂದು ಸರಕಾರ ಹೇಳಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News