ಪಿ.ಎ. ಇಂಜಿನಿಯರಿಂಗ್ ಕಾಲೇಜಿನಲ್ಲಿ ರಾಷ್ಟ್ರೀಯ ಇಂಧನ ಸಪ್ತಾಹ ಆಚರಣೆ
ಮಂಗಳೂರು, ಜ.2: ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತ(KREDL) ಮತ್ತು ಪಿ.ಎ. ಇಂಜಿನಿಯರಿಂಗ್ ಕಾಲೇಜಿನ ಎನ್ನೆಸ್ಸೆಸ್ ಘಟಕದ ಆಶ್ರಯದಲ್ಲಿ 'ರಾಷ್ಟ್ರೀಯ ಇಂಧನ ಸಪ್ತಾಹ'ವನ್ನು ಶನಿವಾರ ಆಚರಿಸಲಾಯಿತು.
ಸಪ್ತಾಹದ ಅಂಗವಾಗಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಲ್ಲಿ ಇಂಧನ ಉಳಿತಾಯ ಮತ್ತು ನವೀಕರಿಸಬಹುದಾದ ಇಂಧನ ಬಗ್ಗೆ ಅರಿವು ಮೂಡಿಸಲು ಹಮ್ಮಿಕೊಂಡ ಜಾಗೃತಿ ಜಾಥಾಕ್ಕೆ ಪದ್ಮಶ್ರೀ ಹರೇಕಳ ಹಾಜಬ್ಬ ಚಾಲನೆ ನೀಡಿದರು.
ಪ್ರಾಂಶುಪಾಲ ಡಾ.ರಮೀಝ್ ಎಂ.ಕೆ., ಡೀನ್ (ವಿದ್ಯಾರ್ಥಿ ವ್ಯವಹಾರ) ಡಾ.ಸಯ್ಯದ್ ಅಮೀನ್ ಅಹ್ಮದ್, ಕಾಲೇಜಿನ ಎನ್ನೆಸ್ಸೆಸ್ ಘಟಕದ ಅಧಿಕಾರಿ ಪ್ರೊ.ಇಸ್ಮಾಯೀಲ್, ದೈಹಿಕ ಶಿಕ್ಷಣ ನಿರ್ದೇಶಕ ಇಕ್ಬಾಲ್, ಪ್ರೊ.ಮಜೀದ್ ಮೊದಲಾದವರು ಉಪಸ್ಥಿತರಿದ್ದರು.
ಈ ವೇಳೆ ಕಾಲೇಜಿನ ವಿದ್ಯಾರ್ಥಿಗಳು ಇಂಧನ ಉಳಿತಾಯ ಹಾಗೂ ಪ್ರಾತ್ಯಕ್ಷಿಕೆಗಳನ್ನು ಪ್ರದರ್ಶಿಸಿದರು.
ಪ್ರೊ.ಜಾನ್ ವಾಲ್ಡರ್ ಇಂಧನ ಉಳಿತಾಯ ಹಾಗೂ ಅದರಿಂದ ಆಗುವ ಉಪಯೋಗಗಳ ಬಗ್ಗೆ ಮಾಹಿತಿ ನೀಡಿದರು.
ಸಹ ವಿದ್ವತ್ ಚಟುವಟಿಕೆ ಸಂಯೋಜಕ ಪ್ರೊ.ಇಸ್ಮಾಯೀಲ್ ಶಾಫಿ ಪದ್ಮಶ್ರೀ ಹರೇಕಳ ಹಾಜಬ್ಬರನ್ನು ಪರಿಚಯಿಸಿದರು. ಪ್ರೊ.ವಿಠಲ್ ಭಟ್ ಕಾರ್ಯಕ್ರಮ ನಿರೂಪಿಸಿದರು.