ಪಿಎ ಕಾಲೇಜು: ಇಗ್ನೈಟ್ ಉದ್ಘಾಟನೆ, ಪದ್ಮಶ್ರೀ ಹಾಜಬ್ಬರಿಗೆ ಸನ್ಮಾನ
ಮಂಗಳೂರು, ಜ.2: ಪಿ.ಎ. ಇಂಜಿನಿಯರಿಂಗ್ ಕಾಲೇಜಿನ ಸೆಂಟರ್ ಫಾರ್ ಮ್ಯಾನೇಜ್ ಮೆಂಟ್ ಸ್ಟಡೀಸ್ ಆ್ಯಂಡ್ ರಿಸರ್ಚ್ ಇದರ ವಿದ್ಯಾರ್ಥಿ ವೇದಿಕೆ ಇಗ್ನೈಟ್ (ignite)ನ ಉದ್ಘಾಟನಾ ಸಮಾರಂಭ ಹಾಗೂ ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಸನ್ಮಾನ ಕಾರ್ಯಕ್ರಮ 'ಪೇಸ್ ಕ್ಯಾಂಪಸ್' ನಲ್ಲಿ ಶನಿವಾರ ನಡೆಯಿತು.
ಕಾರ್ಯಕ್ರಮವನ್ನು ಕೆನರಾ ಚೇಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರೀಸ್ ಕಾರ್ಯದರ್ಶಿ ನಿಸಾರ್ ಫಕೀರ್ ಮುಹಮ್ಮದ್ ಉದ್ಘಾಟಿಸಿ ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಪದ್ಮಶ್ರೀ ಹರೇಕಳ ಹಾಜಬ್ಬರನ್ನು ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಹಾಜಬ್ಬ, ಪಿ.ಎ ಕಾಲೇಜಿನ ಸಮಾಜಕ್ಕೆ ಕೊಡುಗೆಗಳನ್ನು ಕೊಂಡಾಡಿದರು ಹಾಗೂ ಸಂಸ್ಥೆಯ ಅಧ್ಯಕ್ಷ ಪಿ.ಎ ಇಬ್ರಾಹೀಂ ಹಾಜಿಯವರ ಮರಣ ತುಂಬಲಾರದ ನಷ್ಟ ಎಂದು ಅಭಿಪ್ರಾಯಪಟ್ಟರು.
ಕೆನರಾ ಚೇಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರೀಸ್ ನ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಮೈತ್ರೇಯ ಮಾತನಾಡಿದರು.
ಕಾಲೇಜಿನ ಪ್ರಾಂಶುಪಾಲ ಡಾ.ರಮೀಸ್ ಎಂ.ಕೆ. ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.
ಸೆಂಟರ್ ಫಾರ್ ಮ್ಯಾನೇಜ್ ಮೆಂಟ್ ಸ್ಟಡೀಸ್ ಆ್ಯಂಡ್ ರಿಸರ್ಚ್ ನಿರ್ದೇಶಕ ಹಾಗೂ ಪಿ.ಎ. ಸಮೂಹ ಸಂಸ್ಥೆಗಳ ವಿದ್ಯಾರ್ಥಿ ವ್ಯವಹಾರಗಳ ಡೀನ್ ಡಾ.ಸಯ್ಯದ್ ಅಮೀನ್ ಅಹ್ಮದ್ ಸನ್ಮಾನ ಕಾರ್ಯಕ್ರ್ರಮ ನೆರೆವೇರಿಸಿದರು.
ಪ್ರೊ.ಝೊಹೇಬ್ ಅಲಿ ಇಗ್ನೇಯ್ಟ್ (ignite)ನ ಪರಿಚಯ ಮಾಡಿದರು. ವಿದ್ಯಾರ್ಥಿ ಯಾಸರ್ ಅಫ್ರೀನ್ ಪ್ರಾರ್ಥಿಸಿದರು. ನಫೀಸಾ ತರನ್ನುಮ್ ಸ್ವಾಗತಿಸಿದರು. ಅಹ್ಮದ್ ಅಶ್ಫಕ್ ವಂದಿಸಿದರು. ನ್ಯೂಫೈಝ ಬಾನು ಕಾರ್ಯಕ್ರಮ ನಿರ್ವಹಿಸಿದರು.