ಬೆಂಗಳೂರು ನಗರದ ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿ ಸಿಎಂ ನೇತೃತ್ವದಲ್ಲಿ ಸಭೆ
Update: 2022-01-02 13:58 IST
ಬೆಂಗಳೂರು, ಜ.1: ಬೆಂಗಳೂರು ನಗರದ ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಬೆಂಗಳೂರಿನ ಶಾಸಕರು, ಸಚಿವರ ಸಭೆಯು ಇಂದು ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ನಡೆಯಿತು.
ಸಚಿವರಾದ ಆಶೋಕ, ವಿ ಸೋಮಣ್ಣ, ಎಸ್.ಟಿ. ಸೋಮಶೇಖರ್, ಡಾ: ಸಿ.ಎನ್.ಅಶ್ವತ್ಥ್ ನಾರಾಯಣ, ಬಿ.ಎ. ಬಸವರಾಜ, ಕೆ.ಗೋಪಾಲಯ್ಯ, ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್, ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್, ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ, ಆಡಳಿತಾಧಿಕಾರಿ ರಾಕೇಶ್ ಸಿಂಗ್, ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತೆ ವಂದಿತಾ ಶರ್ಮಾ, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್.ಪ್ರಸಾದ್ ಸಭೆಯಲ್ಲಿ ಉಪಸ್ಥಿತರಿದ್ದರು.