ಬೆಂಗಳೂರು: ಸ್ನಾನದ ಕೋಣೆಯಲ್ಲಿ ಮನಗೆಲಸದ ಯುವತಿಯ ಮೃತದೇಹ ಪತ್ತೆ

Update: 2022-01-02 13:54 GMT

ಬೆಂಗಳೂರು, ಜ. 2: ಸಾಫ್ಟ್ ವೇರ್ ಕಂಪೆನಿ ಉದ್ಯೋಗಿ ಯೊಬ್ಬರು ಮನೆಯಲ್ಲಿ ಕೆಲಸಕ್ಕಿದ್ದ ಯುವತಿಯ ಶವವು ಸ್ನಾನದ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶಂಕಾಸ್ಪದವಾಗಿ ಪತ್ತೆಯಾಗಿದ್ದು, ಈ ಸಂಬಂಧ ಬೆಳ್ಳಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಮಿಳುನಾಡು ಮೂಲದ ಕವಿತಾ (19) ಮೃತ ಯುವತಿ ಎಂದು ಪೊಲೀಸರು ಗುರುತಿಸಿದ್ದಾರೆ.

ಸಾಫ್ಟ್ ವೇರ್ ಕಂಪೆನಿ ಉದ್ಯೋಗಿ ವಿವೇಕ್ ಅವರ ಬೆಳ್ಳಂದೂರಿನ ಮನೆಯಲ್ಲಿ ಕವಿತಾ ಮಗು ನೋಡಿಕೊಳ್ಳುವ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. 

 ಎರಡು ದಿನಗಳ ಹಿಂದೆ ಬೆಳಗ್ಗೆ ಸ್ನಾನದ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಕವಿತಾ ಅವರ ಶವ ಪತ್ತೆಯಾಗಿದೆ. 

ಈ ಕುರಿತು ಯುವತಿಯ ತಾಯಿ ದೂರು ನೀಡಿದ್ದಾರೆ. ಅದರ ಆಧಾರದಲ್ಲಿ ಅನುಮಾನಾಸ್ಪದ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದೇವೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News