×
Ad

ಕುಕ್ಕುಂದೂರು: 'ಕ್ಷಯಮುಕ್ತ ಗ್ರಾಮಕ್ಕಾಗಿ- ಸಮುದಾಯದ ಸಹಭಾಗಿತ್ವ' ಕಾರ್ಯಕ್ರಮ

Update: 2022-01-02 22:40 IST

ಕಾರ್ಕಳ : ಕುಕ್ಕುಂದೂರು ಗ್ರಾಮ ಪಂಚಾಯತ್‌ನಲ್ಲಿ ಕ್ಷಯಮುಕ್ತ ಗ್ರಾಮಕ್ಕಾಗಿ ಸಮುದಾಯದ ಸಹಭಾಗಿತ್ವ ಕಾರಯ್ಕ್ರಮಕ್ಕೆ ಗ್ರಾ.ಪಂ. ಅಧ್ಯಕ್ಷೆ ಶಶಿಮಣಿ ಸಂಪತ್ ಚಾಲನೆ ನೀಡಿದರು. ‌

ಕರ್ನಾಟಕ ಸರಕಾರ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕ್ಷಯರೋಗ ನಿರ್ಮೂಲನ ಕೇಂದ್ರ, ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ, ಕ್ಷಯರೋಗ ನಿರ್ಮೂಲನ ಘಟಕ, ಪ್ರಾಥಮಿಕ ಆರೋಗ್ಯ ಕೇಂದ್ರ ಕುಕ್ಕುಂದೂರು ಹಾಗೂ ಗ್ರಾಮ ಪಂಚಾಯತ್ ಕುಕ್ಕುಂದೂರು ಸಂಯುಕ್ತ ಆಶ್ರಯದಲ್ಲಿ 2025 ಕ್ಕೆ ಕ್ಷಯ ಮುಕ್ತ ಭಾರತ ಮಾಡುವ ನಿಟ್ಟಿನಲ್ಲಿ ಕೇಂದ್ರ ಸರಕಾರದ ಮಹತ್ವಕಾಂಕ್ಷೆ ಕಾರ್ಯತಂತ್ರವಾದ "ಕ್ಷಯಮುಕ್ತ ಗ್ರಾಮಕ್ಕಾಗಿ- ಸಮುದಾಯದ ಸಹಭಾಗಿತ್ವ ಕಾರ್ಯಕ್ರಮ ನಡೆಯಿತು. 

ಕುಕ್ಕುಂದೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಅನಿಲ್ ಪೂಜಾರಿ ಸ್ಟಿಕರ್ ಬಿಡುಗಡೆಗೊಳಿಸಿದರು. ತಾಲೂಕು ಆರೋಗ್ಯಾಧಿಕಾರಿ ಡಾ. ಕೃಷ್ಣಾನಂದ ಶೆಟ್ಟಿ ಮಾಹಿತಿ ನೀಡಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರದೀಪ್ ಕುಮಾರ್ ಶೆಟ್ಟಿ ಪಂಚಾಯತ್‌ ನಿಂದ ವಹಿಸುವ ಕ್ರಮದ ಕುರಿತು ತಿಳಿಸಿದರು.

ಸಾರ್ವಜನಿಕ ಆಸ್ಪತ್ರೆ ಎನ್‌ಸಿಡಿ ವಿಭಾಗದ ವೈದ್ಯಾಧಿಕಾರಿ ಡಾ. ಶಶಾಂಕ್ ಆರ್. ಶೆಟ್ಟಿ, ಕುಕ್ಕುಂದೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಪ್ರತೀಕ್ಷಾ ಶೆಟ್ಟಿ ಉಪಸ್ಥಿತರಿದ್ದರು. ಹಿರಿಯ ಚಿಕಿತ್ಸಾ ಮೇಲ್ವಿಚಾರಕ ಶಿವಕುಮಾರ್ ಸ್ವಾಗತಿಸಿದರು. ಎನ್‌ಸಿಡಿ ವಿಭಾಗದ ಆಪ್ತ ಸಮಾಲೋಚಕ ಕಿರಣ್ ಬಾಬು ಕಾರ್ಯಕ್ರಮ ನಿರೂಪಿಸಿ, ಕುಮುದಾವತಿ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News