×
Ad

ಎಡಪದವು: ಬಸ್ ನಿಲ್ದಾಣಕ್ಕೆ ಪೊಲೀಸ್ ಜೀಪ್ ಢಿಕ್ಕಿ

Update: 2022-01-03 14:16 IST
ಸಾಂದರ್ಭಿಕ ಚಿತ್ರ

ಮಂಗಳೂರು, ಜ.3: ನಗರ ಹೊರವಲಯದ ಎಡಪದವಿನ ವಿವೇಕಾನಂದ ಜೂನಿಯರ್ ಕಾಲೇಜು ಮುಂಭಾಗದಲ್ಲಿರುವ ಬಸ್ ಪ್ರಯಾಣಿಕರ ತಂಗುದಾಣಕ್ಕೆ ಪೊಲೀಸ್ ಜೀಪೊಂದು ಢಿಕ್ಕಿ ಹೊಡೆದ ಘಟನೆ ಸೋಮವಾರ ನಡೆದಿದೆ.

ನಗರದ ಪಾಂಡೇಶ್ವರ ಮಹಿಳಾ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ರೇವತಿ ಅವರಿದ್ದ ಪೊಲೀಸ್ ಜೀಪ್ ಚಾಲಕನ ನಿಯಂತ್ರಣ ತಪ್ಪಿ ಬಸ್ ಪ್ರಯಾಣಿಕರ ತಂಗುದಾಣಕ್ಕೆ ಢಿಕ್ಕಿ ಹೊಡೆಯಿತು ಎನ್ನಲಾಗಿದೆ. ಇದರಿಂದ ರೇವತಿ ಅವರಿಗೆ ಸಣ್ಣ ಪ್ರಮಾಣದ ಗಾಯವಾಗಿದೆ ಎಂದು ತಿಳಿದು ಬಂದಿದೆ.

ತಕ್ಷಣ ಅಲ್ಲೇ ಇದ್ದ ಎಡಪದವು ಗ್ರಾಪಂ ಅಧ್ಯಕ್ಷ ಸುಕುಮಾರ್ ದೇವಾಡಿಗ ಮತ್ತಿತರರು ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ, ಅಪಘಾತದಲ್ಲಿ ಪೊಲೀಸ್ ಜೀಪ್ ಜಖಂಗೊಂಡಿದ್ದು. ಬಸ್ ಪ್ರಯಾಣಿಕರ ತಂಗುದಾಣಕ್ಕೆ ಹಾನಿಯಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News