ರಾಮನಗರದ ಬಂಡೆಗಳನ್ನೇ ಅರಗಿಸಿಕೊಂಡವರಿಗೆ ಟೀಕೆಗಳನ್ನು ಜೀರ್ಣಿಸಿಕೊಳ್ಳುವುದು ಯಾವ ಲೆಕ್ಕ: ಕುಮಾರಸ್ವಾಮಿ ವಾಗ್ದಾಳಿ

Update: 2022-01-03 16:06 GMT

ಮೈಸೂರು,ಜ.3: ರಾಮನಗರದ ಬಂಡೆಗಳನ್ನೇ ಜೀರ್ಣಿಸಿಕೊಂಡವರಿಗೆ ಟಿಕೆಗಳನ್ನು ಜೀರ್ಣಿಸಿಕೊಳ್ಳುವುದು ಯಾವ ಲೆಕ್ಕ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದರು.

ನಗರದಲ್ಲಿ ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೇಕೆದಾಟು ಪಾದಯಾತ್ರೆ ಒಂದು ರಾಜಕೀಯ ಗಿಮಿಕ್, ನಾನು ಮುಖ್ಯಮಂತ್ರಿಯಾಗಿದ್ದ ವೇಳೆ ಹಿಂದೆ ಕೇಂದ್ರ ಸಚಿವರಾಗಿದ್ದ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿ ಮೇಕೆದಾಟು ಯೋಜನೆಗೆ ಡಿಪಿಆರ್ ಮಾಡಿಸಿದ್ದೆ. ಈಗ ರಾಜಕೀಯ ಲಾಭಕ್ಕಾಗಿ ಕಾಂಗ್ರೆಸ್‍ನವರು ಪಾದಯಾತ್ರೆ ಮಾಡಲು ಹೊರಟ್ಟಿದ್ದಾರೆ. ಇದು ನೂರಕ್ಕೆ ಇನ್ನೂರರಷ್ಟು ರಾಜಕೀಯ ಗಿಮಿಕ್ ಎಂದು ಟೀಕಿಸಿದರು.

ರಾಮನಗರ ಜಿಲ್ಲೆ ಮಾಡಿದವನು ನಾನು. ಜಿಲ್ಲೆ ಅಭಿವೃದ್ಧಿ ಮಾಡಿದವನು ನಾನು ಮೈಸೂರಿನಲ್ಲಿ ಇದ್ದೇನೆ. ಆದರೆ ವೇದಿಕೆಯ ಮೇಲೆ ಸಚಿವರು ಮತ್ತು ಸಂಸದರು ಕಿತ್ತಾಡಿಕೊಳ್ಳುತ್ತಿದ್ದಾರೆ. ಮುಖ್ಯಮಂತ್ರಿಯಾಗಿದ್ದಾಗ ರಾಮನಗರಕ್ಕೆ ನಾನು ರಾಜೀವ್ ಗಾಂಧಿ ಹೆಲ್ತ್ ಯುನಿವರ್ಸಿಟಿಗೆ ಅನುಮೋದನೆ ಮಾಡಿದ್ದೆ. ರಾಮನಗರ ಜಿಲ್ಲೆಗೆ ನರ್ಸಿಂಗ್, ಮೆಡಿಕಲ್ ಕಾಲೇಜು ಮಂಜೂರು ಮಾಡಿದ್ದೆ. ಇದ್ದಾಕ್ಕಾಗಿ 360 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದ್ದೇನೆ. ಆದರೆ ನಮ್ಮ ಸರ್ಕಾರ ಇಳಿಯುತ್ತಿದಂತೆ ಎಲ್ಲರೂ ಎಲ್ಲವನ್ನೂ ನಿಲ್ಲಿಸಿಬಿಟ್ಟರು. ಬಿಜೆಪಿ ಮತ್ತು ಕಾಂಗ್ರೆಸ್ ರಾಮನಗರಕ್ಕೆ ಏನನ್ನೂ ಮಾಡಿಲ್ಲ. ಅಭಿವೃದ್ಧಿ ಮಾಡಿದವನು ನಾನು ಎಂದು ಹೆಚ್.ಡಿ. ಕುಮಾರಸ್ವಾಮಿ ಇಂದಿನ ವೇದಿಕೆಯ ಮೇಲಿನ ಕಿತ್ತಾಟದ ಘಟನೆಗೆ ಪ್ರತಿಕ್ರಿಯೆ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News