15-18 ವಯೋಮಾನದವರಿಗೆ ಕೋವಿಡ್ ಲಸಿಕೆ : ಒಂದೇ ದಿನ 37 ಲಕ್ಷ ಮಕ್ಕಳಿಗೆ ಕೋವಿಡ್ ಲಸಿಕೆ

Update: 2022-01-03 17:34 GMT

ಹೊಸದಿಲ್ಲಿ, ಜ. 3: ದೇಶದ ಹಲವು ನಗರಗಳಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿರುವ ನಡುವೆ 15ರಿಂದ 18ರ ವರೆಗಿನ ವಯೋಮಾನದ ಮಕ್ಕಳಿಗೆ ಲಸಿಕೆ ನೀಡಿಕೆ ಸೋಮವಾರ ಆರಂಭವಾಗಿದ್ದು, ಮೊದಲ ದಿನವೇ 37, 84, 212 ಮಕ್ಕಳು ಲಸಿಕೆ ನೀಡಲಾಗಿದೆ. ಈ ಲಸಿಕಾ ಕಾರ್ಯಕ್ರಮವನ್ನು ಶಾಲೆಗಳೊಂದಿಗೆ ಸಮಾಲೋಚನೆ ನಡೆಸಿ ಆಸ್ಪತ್ರೆಗಳು ಹಾಗೂ ಆರೋಗ್ಯ ಕೇಂದ್ರಗಳಲ್ಲಿ ನಡೆಸಲಾಗುತ್ತಿದೆ. ದೇಶದಲ್ಲಿ 15ರಿಂದ 17ರ ವರೆಗಿನ ವಯೋಮಾನದ ಒಟ್ಟು 7.4 ಕೋಟಿ ಮಕ್ಕಳಿದ್ದು, ಇದುವರೆಗೆ ಈ ವಯೋಮಾನದ 49,07,874 ಮಕ್ಕಳು ಲಸಿಕೆಗೆ ಹೆಸರು ನೋಂದಾಯಿಸಿಕೊಂಡಿದ್ದಾರೆ ಎಂದು ಕೋವಿನ್ ಪೋರ್ಟಲ್ ಮಾಹಿತಿ ನೀಡಿದೆ.

ಈ ಕಾರ್ಯಕ್ರಮದಲ್ಲಿ ಮಕ್ಕಳಿಗೆ ಕೊವ್ಯಾಕ್ಸಿನ್ ಲಸಿಕೆಯ ಎರಡು ಡೋಸ್‌ಗಳನ್ನು 28 ದಿನಗಳ ಅಂತರದಲ್ಲಿ ನೀಡಲಾಗುತ್ತಿದ್ದು, ದೊಡ್ಡ ಸಂಖ್ಯೆಯಲ್ಲಿ ಶಾಲೆ ಹಾಗೂ ಶಿಕ್ಷಣ ಸಂಸ್ಥೆಗಳನ್ನು ಕೂಡಾ ಕೂಡಾ ಲಸಿಕಾ ಕೇಂದ್ರವಾಗಿ ಬಳಸಲಾಗುತ್ತಿದೆ. ‘‘18 ವಯೋಮಾನಕ್ಕಿಂತ ಕೆಳಗಿನವರಿಗೆ ಕೊವ್ಯಾಕ್ಸಿನ್ ಲಸಿಕೆ ನೀಡಲು ಮಾತ್ರ ಅನುಮತಿ ನೀಡಲಾಗಿದೆ. 18ಕ್ಕಿಂತ ಮೇಲಿನ (ಉದಾಹರಣೆ 2004 ಅಥವಾ ಅದಕ್ಕಿಂತ ಮೊದಲು ಜನಿಸಿದವರು) ವಯೋಮಾನದವರಿಗೆ ಕೋವಿಶೀಲ್ಡ್ ಸೇರಿದಂತೆ ಎಲ್ಲ ಲಸಿಕೆಗಳನ್ನು ಪಡೆಯಲು ಅನುಮತಿಸಲಾಗಿದೆ. 15ರಿಂದ 18ರ ವರೆಗಿನ ವಯೋಮಿತಿಯವರು (2005,2006,2007ರಲ್ಲಿ ಜನಿಸಿದವರು) ಕೋವ್ಯಾಕ್ಸಿನ್ ಲಸಿಕೆಯನ್ನು ಮಾತ್ರ ಪಡೆದುಕೊಳ್ಳಲು ಅರ್ಹರು’’ ಎಂದು ಆರೋಗ್ಯ ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿ ವಿಕಾಸ್ ಶೀಲ್ ಅವರು ಹೇಳಿದ್ದಾರೆ.

ಮಧ್ಯಪ್ರದೇಶದಲ್ಲಿ ದೇಶದಲ್ಲೇ ಅತ್ಯಧಿಕ ಸಮಯ 7.5 ಲಕ್ಷ ಮಕ್ಕಳು ಲಸಿಕೆ ಹಾಕಿಸಿಕೊಂಡಿದ್ದಾರೆ. ಜನವರಿ 20ರ ಒಳಗೆ ಈ ಅರ್ಹ ವಯೋಮಾನದ ರಾಜ್ಯದ ಎಲ್ಲ 48 ಲಕ್ಷ ಮಕ್ಕಳಿಗೆ ಲಸಿಕೆ ನೀಡುವ ಮಹತ್ವಾಕಾಂಕ್ಷೆಯ ಗುರಿಯನ್ನು ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ನಿಗದಿಪಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News