ಅಪರಾಧ ಪ್ರಕರಣ: ಸಂತ್ರಸ್ತರಿಗೆ ಪರಿಹಾರ ನೀಡದಿದ್ದರೆ ಪ್ರಧಾನ ಕಾರ್ಯದರ್ಶಿ ಹಾಜರಾಗಬೇಕಾಗುತ್ತೆ; ಹೈಕೋರ್ಟ್ ಎಚ್ಚರಿಕೆ

Update: 2022-01-03 17:40 GMT

ಬೆಂಗಳೂರು, ಜ.3: ಅಪರಾಧ ಪ್ರಕರಣಗಳಲ್ಲಿನ ಸಂತ್ರಸ್ತರಿಗೆ ಪರಿಹಾರ ನೀಡಲು ಸರಕಾರ ಕೂಡಲೇ ಹಣ ಬಿಡುಗಡೆಗೊಳಿಸದಿದ್ದರೆ ಮುಂದಿನ ಕಲಾಪದ ವೇಳೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ವಿಚಾರಣೆಗೆ ಹಾಜರಾಗಬೇಕು ಎಂದು ಹೈಕೋರ್ಟ್ ನಿರ್ದೇಶಿಸಿದೆ.

ಲೈಂಗಿಕ ದೌರ್ಜನ್ಯಕ್ಕೆ ಸಿಲುಕಿದ ಮಹಿಳೆಯರ ಸುರಕ್ಷತೆ ಹಾಗೂ ಪುನರ್ವಸತಿಗೆ ಸಂಬಂಧಿಸಿದಂತೆ ಲೈಂಗಿಕ ದೌರ್ಜನ್ಯದ ವಿರುದ್ಧ ಜನರ ಚಳುವಳಿ ಸಂಘ ಸಂಸ್ಥೆ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿತು.

ಈ ವೇಳೆ ಕೆಎಸ್‍ಎಲ್‍ಎಸ್‍ಎ ಪರ ವಕೀಲರು ವಾದಿಸಿ, ಸಂತ್ರಸ್ತರಿಗೆ ಪರಿಹಾರ ನೀಡಲು ಹಣ ಬಿಡುಗಡೆ ಮಾಡುವಂತೆ ಹೈಕೋರ್ಟ್ ನಿರ್ದೇಶಿಸಿದ್ದರೂ ಸರಕಾರ ಈವರಗೆ ಹಣ ಬಿಡುಗಡೆ ಮಾಡಿಲ್ಲ ಎಂದು ತಿಳಿಸಿದರು. 

ವಾದ ಆಲಿಸಿದ ಪೀಠ, ರಾಜ್ಯ ಸರಕಾರ ಈ ಕೂಡಲೇ ಹಣ ಬಿಡುಗಡೆ ಮಾಡಬೇಕು. ಇಲ್ಲದಿದ್ದರೆ ಮುಂದಿನ ವಿಚಾರಣೆ ವೇಳೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಖುದ್ದು ವಿಚಾರಣೆಗೆ ಹಾಜರಾಗಬೇಕು ಎಂದು ನಿರ್ದೇಶಿಸಿ ವಿಚಾರಣೆ ಮುಂದೂಡಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News