ಲಸಿಕೆ ನೀಡಿಕೆ ಹೆಚ್ಚಿಸುವಂತೆ ಚುನಾವಣಾ ರಾಜ್ಯಗಳಿಗೆ ಚು.ಆಯೋಗದ ಸೂಚನೆ

Update: 2022-01-03 17:48 GMT
ಸಾಂದರ್ಭಿಕ ಚಿತ್ರ

ಹೊಸದಿಲ್ಲಿ,ಜ.3: ಚುನಾವಣಾ ಆಯೋಗವು ಕೋವಿಡ್ ಲಸಿಕೆ ನೀಡಿಕೆ ಅಭಿಯಾನವನ್ನು ತೀವ್ರಗೊಳಿಸುವಂತೆ ಸೂಚಿಸಿ ವಿಧಾನಸಭಾ ಚುನಾವಣೆಗಳು ನಡೆಯಲಿರುವ ಐದು ರಾಜ್ಯಗಳಿಗೆ ಪತ್ರವನ್ನು ಬರೆದಿದೆ.

ಮಣಿಪುರದಲ್ಲಿ ಮೊದಲ ಡೋಸ್ ಲಸಿಕೆ ನೀಡಿಕೆಯ ಕಡಿಮೆ ಶೇಕಡಾವಾರು ಪ್ರಮಾಣದ ಬಗ್ಗೆಯೂ ಕಳವಳವನ್ನು ವ್ಯಕ್ತಪಡಿಸಿರುವ ಆಯೋಗವು,ಲಸಿಕೆ ನೀಡಿಕೆ ವೇಗವನ್ನು ಹೆಚ್ಚಿಸುವಂತೆ ಅಲ್ಲಿಯ ಸರಕಾರಕ್ಕೆ ತಿಳಿಸಿದೆ ಎಂದು ಅಧಿಕಾರಿಗಳನ್ನು ಉಲ್ಲೇಖಿಸಿ ಮೂಲಗಳು ತಿಳಿಸಿವೆ.

ಪಂಜಾಬ್,ಗೋವಾ,ಉತ್ತರಾಖಂಡ,ಉತ್ತರ ಪ್ರದೇಶ ಮತ್ತು ಮಣಿಪುರ ರಾಜ್ಯ ವಿಧಾನಸಭೆಗಳಿಗೆ ಚುನಾವಣೆಗಳು ನಡೆಯಲಿದ್ದು,ಆಯೋಗವು ಈ ತಿಂಗಳಲ್ಲಿ ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸುವ ಸಾಧ್ಯತೆಯಿದೆ.

ಚುನಾವಣಾ ಆಯೋಗದ ಸೂಚನೆಯ ಮೇರೆಗೆ ಕೇಂದ್ರ ಸರಕಾರವು ಕಳೆದ ವರ್ಷದ ಡಿ.27ರಂದು ಅರ್ಹ ವ್ಯಕ್ತಿಗಳಿಗೆ ಲಸಿಕೆ ನೀಡಿಕೆಯನ್ನು ಹೆಚ್ಚಿಸುವಂತೆ ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಸೂಚಿಸಿತ್ತು. ಕೊರೋನವೈರಸ್ ಪ್ರಕರಣಗಳು ಮತ್ತು ಅದರ ನೂತನ ಪ್ರಭೇದ ಒಮೈಕ್ರಾನ್ ಉಲ್ಬಣವನ್ನು ತಡೆಯಲು ಪರೀಕ್ಷೆಗಳನ್ನು ಹೆಚ್ಚಿಸುವಂತೆಯೂ ಅದು ಸಂಬಂಧಿತ ರಾಜ್ಯಗಳಿಗೆ ಸೂಚಿಸಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News