×
Ad

ವಿಟ್ಲ : ಬಾಲಕ ಆತ್ಮಹತ್ಯೆ

Update: 2022-01-04 11:29 IST

ಬಂಟ್ವಾಳ, ಡಿ.4: ಅಪ್ರಾಪ್ರ ಬಾಲಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಅಳಿಕೆ ಗ್ರಾಮದ ನೆಕ್ಕಿತಪುಣಿ ಎಂಬಲ್ಲಿ ನಡೆದಿದೆ.

ಅಳಿಕೆ ಗ್ರಾಮದ ನೆಕ್ಕಿತಪುಣಿ ನಿವಾಸಿ ಸವರ್ ಡಿಸೋಜ ಅವರ ಪುತ್ರ ಸಂದೀಪ್ ಅನಿಸಿತ್ ಡಿಸೋಜ(15) ಆತ್ಮಹತ್ಯೆ ಮಾಡಿಕೊಂಡ ಬಾಲಕ ಎಂದು ತಿಳಿದುಬಂದಿದೆ.

ಈತ 10ನೇ ತರಗತಿ ಕಲಿಯುತ್ತಿದ್ದು, ಸರಿಯಾಗಿ ಶಾಲೆ ಹೋಗುತ್ತಿರಲಿಲ್ಲ. ನಿನ್ನೆ ರಾತ್ರಿ ಕೋಣೆಯಲ್ಲಿ ಮಲಗಿದ್ದ ಈತ ಬೆಳಗ್ಗೆ ಮನೆಯವರು ನೋಡಿದಾಗ ಮೃತದೇಹ ನೇಣು ಹಾಕಿದ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ದೂರಲಾಗಿದೆ.

ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿದ್ದಾರೆ.‌

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News