ಶಿವಮೊಗ್ಗ: ಸಚಿವ ಡಾ. ಅಶ್ವತ್ಥ ನಾರಾಯಣ ರಾಜೀನಾಮೆಗೆ ಒತ್ತಾಯಿಸಿ ಪ್ರತಿಭಟನೆ
ಶಿವಮೊಗ್ಗ : ಸಚಿವ ಡಾ. ಅಶ್ವತ್ಥ ನಾರಾಯಣ ರಾಜೀನಾಮೆಗೆ ಆಗ್ರಹಿಸಿ ಶಿವಮೊಗ್ಗ ಜಿಲ್ಲಾ ಎನ್‌ಎಸ್‌ಯುಐ ವತಿಯಿಂದ ನಗರದ ಮಹಾವೀರ ವೃತ್ತದಲ್ಲಿ ಪ್ರತಿಭಟನೆ ನಡೆಯಿತು.
ರಾಮನಗರ ಜಿಲ್ಲೆಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಚಾಲನೆಗೆ ಸಂಬಂಧಿಸಿದ ಬೃಹತ್ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಂಸದ ಡಿ.ಕೆ.ಸುರೇಶ್ ಸೇರಿದಂತೆ ಪ್ರಮುಖ ಜನಪ್ರತಿನಿಧಿಗಳು ಭಾಗಿಯಾಗಿದ್ದರು. ಸಚಿವ ಡಾ. ಅಶ್ವತ್ಥ ನಾರಾಯಣ ಅವರು ಭಾಷಣದ ಸಂದರ್ಭದಲ್ಲಿ ಅವಾಚ್ಯ ಶಬ್ಧಗಳನ್ನು ಬಳಸುವ ಜತೆಯಲ್ಲಿ ಸಂಸದ ಡಿ.ಕೆ.ಸುರೇಶ್ ಅವರಿಗೆ ಅಗೌರವ ತರುವ ರೀತಿಯಲ್ಲಿ ವರ್ತಿಸಿರುವುದಾಗಿ ಪ್ರತಿಭಟನಾನಿರತರು ದೂರಿದರು.
ಸಂಸದ ಡಿ.ಕೆ.ಸುರೇಶ್ ಅವರಿಗೆ ಅಗೌರವ ತರುವ ರೀತಿಯಲ್ಲಿ ಮಾತನಾಡಿರುವ ಹಾಗೂ ಗೂಂಡಾ ವರ್ತನೆ ತೋರಿರುವ ಸಚಿವ ಡಾ. ಅಶ್ವತ್ಥ ನಾರಾಯಣ ಅವರನ್ನು ಸಂಪುಟದಿಂದ ಕೂಡಲೇ ಕೈಬಿಡಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಶಿವಮೊಗ್ಗ ನಗರ ಎನ್‌ಎಸ್‌ಯುಐ ವತಿಯಿಂದ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಎಚ್ ಎಸ್ ಸುಂದರೇಶ್, ರಾಜ್ಯ ಯುವ ಕಾಂಗ್ರೆಸ್ ನ ಕಾರ್ಯದರ್ಶಿ ಚೇತನ್, ಯುವ ಮುಖಂಡ ಮಧುಸೂದನ್, ಹಾಪ್ ಕಾಮ್ಸ್ ನಿರ್ದೇಶಕರಾದ ಸಂತೆಕಡೂರು ವಿಜಯಕುಮಾರ್ ,ಜಗದೀಶ್, ಪಿಳ್ಳಿಂಗೆರೆ ನಾಗರಾಜ್, ಯೋಗೀಶ್ ಗೌಡ, ಅಕ್ಬರ್, ವಿಜಯ್ , ಚಂದ್ರೋಜಿ ರಾವ್ , ರವಿ , ವಿಕ್ರಂ, ಸುಮನ್, ಅಜಯ್, ಸುಹಾಸ್ , ಯುವ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿ ಶಿವರಾಜ್, ಗೌತಮ್, ಗಿರೀಶ್ ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.