ದ.ಕ. ಜಿಲ್ಲೆ : 72 ಮಂದಿಗೆ ಕೋವಿಡ್; ಒಬ್ಬರು ಬಲಿ
Update: 2022-01-04 19:27 IST
ಮಂಗಳೂರು, ಜ. 4: ದ.ಕ.ಜಿಲ್ಲೆಯಲ್ಲಿ ಮಂಗಳವಾರ 72 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಒಬ್ಬರು ಬಲಿಯಾಗಿದ್ದಾರೆ. 7 ಮಂದಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ಪಾಸಿಟಿವ್ ದರ ಶೇ. 1.13 ದಾಖಲಾಗಿದೆ.
ಜಿಲ್ಲೆಯಲ್ಲಿ ಈವರೆಗೆ 1,16,620 ಪಾಸಿಟಿವ್ ಪ್ರಕರಣ ದಾಖಲಾಗಿದೆ. ಸೋಂಕಿತರ ಪೈಕಿ ಒಟ್ಟು 1,14,576 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. 1,703 ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ. ಸದ್ಯ 341 ಸಕ್ರಿಯ ಪ್ರಕರಣವಿದೆ.
ಕೋವಿಡ್ ನಿಯಮ ಉಲ್ಲಂಘಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ 92,043 ಪ್ರಕರಣ ದಾಖಲಿಸಿ, 1,11,30,530 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಪ್ರಕಟನೆ ತಿಳಿಸಿದೆ.