ಮತ್ಸಗಂಧ ಎಕ್ಸ್‌ಪ್ರೆಸ್ ರೈಲಿನ ಅವಧಿ ವಿಸ್ತರಣೆ
Update: 2022-01-04 19:48 IST
ಉಡುಪಿ, ಜ.4: ಮುಂದಿನ ಜ.31ರವರೆಗೆ ನಿಗದಿಯಾಗಿದ್ದ ಮಂಗಳೂರು ಸೆಂಟ್ರಲ್ ಮತ್ತು ಮುಂಬಯಿಯ ಲೋಕಮಾನ್ಯ ತಿಲಕ್ ನಿಲ್ದಾಣಗಳ ನಡುವೆ ಪ್ರತಿದಿನ ಸಂಚರಿಸುವ ಮತ್ಸಗಂಧ ಎಕ್ಸ್‌ಪ್ರೆಸ್ ರೈಲಿನ ಸಂಚಾರ ಅವಧಿಯನ್ನು ಮುಂದಿನ ಪ್ರಕಟಣೆಯ ವರೆಗೆ ವಿಸ್ತರಿಸಲಾಗಿದೆ ಎಂದು ಕೊಂಕಣ ರೈಲ್ವೆ ಪ್ರಕಟಣೆ ತಿಳಿಸಿದೆ.
ಅದೇ ರೀತಿ ವಾರಕ್ಕೆ ಎರಡು ದಿನ ಸಂಚರಿಸುವ ಎರ್ನಾಕುಲಂ- ಓಕಾ ಎಕ್ಸ್‌ಪ್ರೆಸ್ ರೈಲಿನ ಸಂಚಾರವನ್ನೂ ಸಹ ಮುಂದಿನ ಪ್ರಕಟಣೆಯವರೆಗೆ ಮುಂದುವರಿಸಲಾಗಿದೆ ಎಂದೂ ಪ್ರಕಟಣೆ ತಿಳಿಸಿದೆ.
ಹೆಚ್ಚುವರಿ ಬೋಗಿ ಸೇರ್ಪಡೆ: ವಾರದಲ್ಲಿ ಮೂರು ದಿನ ಸಂಚರಿಸುವ ಎಚ್. ನಿಝಾಮುದ್ದೀನ್-ತಿರುವನಂತಪುರಂ ಸೆಂಟ್ರಲ್- ಎಚ್.ನಿಝಾಮುದ್ದೀನ್ ರಾಜಧಾನಿ ಎಕ್ಸ್‌ಪ್ರೆಸ್ ರೈಲಿಗೆ ಎರಡು ತ್ರಿಟಯರ್ ಎಸಿ ಕೋಚ್‌ನ್ನು ಶಾಶ್ವತವಾಗಿ ಸೇರ್ಪಡೆಗೊಳಿಸಲು ನಿರ್ಧರಿಸಲಾಗಿದೆ. ಹೀಗಾಗಿ ರೈಲು ಒಟ್ಟು 20 ಬೋಗಿಗಳೊಂದಿಗೆ ಸಂಚರಿಸಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.