×
Ad

ಪ್ರಧಾನಮಂತ್ರಿ ಶಿಷ್ಯವೇತನಕ್ಕೆ ಅವಧಿ ಸ್ತರಣೆ

Update: 2022-01-04 19:53 IST

ಉಡುಪಿ, ಜ.4: ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ವತಿಯಿಂದ ಪಿಯುಸಿ 2ನೇ ವರ್ಷ ಹಾಗೂ ಡಿಪ್ಲೋಮ 3ನೇ ವರ್ಷದಲ್ಲಿ ಶೇ.60 ಅಂಕ ಪಡೆದು ಪ್ರಸಕ್ತ ಸಾಲಿನಲ್ಲಿ ತಾಂತ್ರಿಕ ಮತ್ತು ವೃತ್ತಿಪರ ಕೋರ್ಸುಗಳಿಗೆ ಪ್ರವೇಶ ಪಡೆದಿರುವ ಮಾಜಿ ಸೈನಿಕರ ಮಕ್ಕಳು, ಪ್ರಧಾನ ಮಂತ್ರಿ ಶಿಷ್ಯವೇತನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಜನವರಿ 31ರವರೆಗೆ ವಿಸ್ತರಿಸಲಾಗಿದೆ.

ಇದರ ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ ಅನ್ನು ಸಂಪರ್ಕಿಸುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News