×
Ad

ಕೌಶಲ್ಯ ಅಭಿವೃದ್ಧಿ ತರಬೇತಿ

Update: 2022-01-04 19:54 IST

ಉಡುಪಿ, ಜ.4: ಡಾ.ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನ ಎಸ್‌ಸಿಎಸ್‌ಪಿ ಅನುದಾನದಡಿ ಜಿಲ್ಲೆಯ ಚರ್ಮಗಾರಿಕೆ ವೃತ್ತಿಯಲ್ಲಿ ತೊಡಗಿರುವ ಚರ್ಮ ಕುಶಲಕರ್ಮಿಗಳಿಗೆ 2 ತಿಂಗಳ ಕೌಶಲ್ಯ ಅಭಿವೃದ್ಧಿ ತರಬೇತಿಯನ್ನು ಕೋಟ ಮತ್ತು ಉಡುಪಿಯಲ್ಲಿ ಆಯೋಜಿಸ ಲಾಗುತ್ತಿದ್ದು, 18ರಿಂದ 50 ವರ್ಷದೊಳಗಿನ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ತರಬೇತಿ ಅವಧಿಯಲ್ಲಿ ಮಾಸಿಕ 6,000 ರೂ. ಶಿಷ್ಯವೇತನ ನೀಡಲಿದ್ದು, ತರಬೇತಿ ಪೂರೈಸಿದ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರದ ಜೊತೆಗೆ 20,000 ರೂ. ಗಳ ಹೊಲಿಗೆ ಯಂತ್ರವನ್ನು ಉಚಿತವಾಗಿ ನೀಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಸಂಯೋಜಕರು, ಡಾ. ಬಾಬು ಜಗಜೀವನ್ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ, ಉಡುಪಿ ಮೊ.ನಂ:6362891017 ಅನ್ನು ಸಂಪರ್ಕಿಸುವಂತೆ ನಿಗಮದ ಜಿಲ್ಲಾ ಸಂಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News