×
Ad

ಕೃಷಿ ಇಲಾಖೆಯ ವಿವಿಧ ಹುದ್ದೆಗೆ ಗುತ್ತಿಗೆ ಆಧಾರದಲ್ಲಿ ನೇಮಕಕ್ಕೆ ಕ್ರಮ

Update: 2022-01-04 20:03 IST

ಉಡುಪಿ, ಜ.4: ಕೃಷಿ ಇಲಾಖೆ ವತಿಯಿಂದ ಅನುಷ್ಠಾನಗೊಳಿಸಲಾಗುತ್ತಿರುವ ಆತ್ಮ ಯೋಜನೆಯಡಿ ಗುತ್ತಿಗೆ ಆಧಾರದಲ್ಲಿ ಉಪಯೋಜನಾ ನಿರ್ದೇಶಕರು ಹಾಗೂ ಸಹಾಯಕ ತಾಂತ್ರಿಕ ವ್ಯವಸ್ಥಾಪಕರ ತಲಾ 1 ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ನಗರದ ಜಂಟಿ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಖಾಲಿ ಇರುವ ಉಪ ಯೋಜನಾ ನಿರ್ದೇಶಕರ ಹುದ್ದೆಗೆ ಮಾಸಿಕ 42,000 ರೂ. ವೇತನ ನಿಗದಿ ಪಡಿಸಿದ್ದು, ಕೃಷಿ/ಕೃಷಿ ಸಂಬಂಧಿತ ವಿಷಯಗಳಲ್ಲಿ ಸ್ನಾತಕೋತ್ತರ ಪದವಿ ಹಾಗೂ ಸಂಶೋಧನಾ ಕ್ಷೇತ್ರದಲ್ಲಿ ಕನಿಷ್ಠ 5 ವರ್ಷಗಳ ಕ್ಷೇತ್ರ ಮಟ್ಟದ ಅನುಭವ ಹೊಂದಿರುವವರು ಹಾಗೂ ಬೈಂದೂರು ರೈತ ಸಂಪರ್ಕ ಕೇಂದ್ರದಲ್ಲಿ ಖಾಲಿ ಇರುವ ಸಹಾಯಕ ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗೆ ಮಾಸಿಕ 25,000 ರೂ. ವೇತನ ನಿಗದಿ ಪಡಿಸಿದ್ದು, ಕೃಷಿ/ಕೃಷಿ ಸಂಬಂಧಿತ ವಿಷಯಗಳಲ್ಲಿ ಪದವಿ ಹೊಂದಿರುವ, ವಿಸ್ತರಣಾ ಕ್ಷೇತ್ರಗಳಲ್ಲಿ ಅನುಭವವುಳ್ಳ ಸ್ಥಳಿಯ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸಲು ಜನವರಿ 28 ಕೊನೆಯ ದಿನವಾಗಿದ್ದು, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಂಟಿ ಕೃಷಿ ನಿರ್ದೇಶಕರು, ಸಿ ಬ್ಲಾಕ್, 2ನೇ ಮಹಡಿ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 0820- 2574960 ಅನ್ನು ಸಂಪರ್ಕಿಸುವಂತೆ ಕೃಷಿ ಇಲಾಖೆಯ ಆತ್ಮಯೋಜನೆಯ ಯೋಜನಾ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News