ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕ ಮನವಿ
Update: 2022-01-04 20:41 IST
ಮಂಗಳೂರು, ಜ.4: ಕೋಟೆಕಾರ್ ಗ್ರಾಮದ ಹಲವು ಕಡೆ ಭಜರಂಗದಳದ ಕಾರ್ಯಕರ್ತರು ಕ್ರೈಸ್ತ ಧರ್ಮದ ವಿರುದ್ಧ ಬ್ಯಾನರ್‌ಗಳನ್ನು ಅಳವಡಿಸಿರುವುದನ್ನು ಖಂಡಿಸಿ ತಪ್ಪಿತಸ್ಥರ ಮೇಲೆ ಕಾನೂನು ಕ್ರಮ ಜರಗಿಸಬೇಕು ಎಂದು ಆಗ್ರಹಿಸಿ ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಆಲ್ವಿನ್ ಡಿಸೋಜ ನೇತೃತ್ವದಲ್ಲಿ ಉಳ್ಳಾಲ ಪೊಲೀಸ್ ಇನ್‌ಸ್ಪೆಕ್ಟರ್‌ಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭ ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಸಂಯೋಜಕ ಡೆನಿಸ್ ಡಿಸೋಜ, ಮಂಗಳೂರು ತಾಪಂ ಮಾಜಿ ಅಧ್ಯಕ್ಷ ಮುಹಮ್ಮದ್ ಮೋನು, ಮುನ್ನೂರು ಗ್ರಾಪಂ ಅಧ್ಯಕ್ಷ ವಿಲ್ಫ್ರೆಡ್ ಡಿಸೋಜ, ಕಾಂಗ್ರೆಸ್ ಹಿಂದುಳಿದ ವರ್ಗದ ಘಟಕದ ಅಧ್ಯಕ್ಷ ದೀಪಕ್ ಪಿಲಾರ್, ಯುವ ಇಂಟೆಕ್ ಅಧ್ಯಕ್ಷ ವಿಶಾಲ್ ಕೊಲ್ಯ ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಉಪಾಧ್ಯಕ್ಷ ಮ್ಯಾಕ್ಸಿಮ್ ಡಿಸೋಜ ಪ್ರೇಮ್ ಪ್ರಕಾಶ್ ಸಂಘಟನೆಯ ಕಾರ್ಯದರ್ಶಿ ಶೈನಿ ದಿಸೋಜ, ಉಳ್ಳಾಲ ನಗರ ಸಭೆಯ ಸದಸ್ಯ ಮೀನಾ ಶಾಂತಿ ಡಿಸೋಜ , ಮುನಾರ್ ಮತ್ತಿತರರು ಉಪಸ್ಥಿತರಿದ್ದರು.