ಪರ್ಯಾಯೋತ್ಸವ: ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ
Update: 2022-01-04 21:23 IST
ಉಡುಪಿ, ಜ.4: ಕೃಷ್ಣಾಪುರ ಮಠದ ಶ್ರೀವಿದ್ಯಾಸಾಗರ ತೀರ್ಥ ಸ್ವಾಮೀಜಿಯ ಚತುರ್ಥ ಪರ್ಯಾಯ ಮಹೋತ್ಸವದ ಹಿನೆಲೆಯಲ್ಲಿ ಸೂಕ್ತ ಭದ್ರತೆ ಹಾಗೂ ವಾಹನ ನಿಲುಗಡೆಗೆ ಸುಸಜ್ಜಿತ ವ್ಯವಸ್ಥೆ ಕಲ್ಪಿಸುವ ಬಗ್ಗೆ ಇಂದು ಉಡುಪಿ ಶಾಸಕ ಕೆ.ರಘುಪತಿ ಭಟ್, ಪೊಲೀಸ್ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಚರ್ಚಿಸಿದರು.
ಈ ಸಂದರ್ಭದಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಎನ್.ವಿಷ್ಣುವರ್ಧನ್, ಹೆಚ್ಚುವರಿ ಎಸ್ಪಿ ಕುಮಾರ್ ಚಂದ್ರ, ಡಿವೈಎಸ್ಪಿ ಸುಧಾಕರ್ ನಾಯ್ಕ್, ಜಿಲ್ಲಾ ಸಶಸ್ತ್ರ ಮೀಸಲು ಪಡೆ ಡಿವೈಎಸ್ಪಿ ರಾಘವೇಂದ್ರ, ಉಡುಪಿ ನಗರ ಪೊಲೀಸ್ ನಿರೀಕ್ಷಕ ಪ್ರಮೋದ್, ಮಣಿಪಾಲ ವೃತ್ತ ನಿರೀಕ್ಷಕ ಮಂಜುನಾಥ್ ಎಂ., ಮಲ್ಪೆ ಪೊಲೀಸ್ ವೃತ್ತ ನಿರೀಕ್ಷಕ ಶರಣ ಗೌಡ, ಸಂಚಾರಿ ಪೊಲೀಸ್ ಉಪ ನಿರೀಕ್ಷಕ ಅಬ್ದುಲ್ ಖಾದರ್ ಹಾಗೂ ಪರ್ಯಾಯೋತ್ಸವ ಸಮಿತಿ ಸದಸ್ಯರು ಉಪಸ್ಥಿತರಿದ್ದರು.