ಬೈಕ್ ಪಲ್ಟಿ: ಸಹಸವಾರ ಮೃತ್ಯು

Update: 2022-01-04 16:18 GMT

ಕಾಪು, ಜ.4: ಬೈಕ್ ಅಪಘಾತದಲ್ಲಿ ಸವಾರರೊಬ್ಬರು ಮೃತಪಟ್ಟ ಘಟನೆ ಪೊಲಿಪು ಕ್ರಾಸ್‌ನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.

ಮೃತರನ್ನು ಸಹ ಸವಾರ ಪ್ರಸಾದ(32) ಎಂದು ಗುರುತಿಸಲಾಗಿದೆ. ಸವಾರ ಸಂತೋಷ ಶೆಟ್ಟಿ ಗಾಯಗೊಂಡ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕಾಪುವಿನಲ್ಲಿ ಮಂಗಳೂರು -ಉಡುಪಿ ಸರ್ವಿಸ್ ರಸ್ತೆಯಲ್ಲಿ ಹೋಗುತ್ತಿದ್ದ ಬೈಕ್, ಒಮ್ಮೇಲೆ ಎಡಕ್ಕೆ ತಿರುಗಿಸಿದ ಪರಿಣಾಮ ರಸ್ತೆಗೆ ಬಿತ್ತೆನ್ನಲಾಗಿದೆ. ಇದರಿಂದ ಇಬ್ಬರು ಸವಾರರು ಗಾಯಗೊಂಡಿದ್ದು, ಇದರಲ್ಲಿ ಗಂಭೀರವಾಗಿ ಗಾಯಗೊಂಡ ಪ್ರಸಾದ ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಜ.4ರಂದು ಬೆಳಗ್ಗೆ 7:10 ಗಂಟೆಗೆ ಮೃತಪಟ್ಟರು. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News