ವಿದ್ಯಾಸಿರಿ ಯೋಜನೆ: ಅರ್ಜಿ ಸಲ್ಲಿಕೆಯ ಅವಧಿ ವಿಸ್ತರಣೆ
ಮಂಗಳೂರು, ಜ.4: ಸರಕಾರಿ ವಿದ್ಯಾರ್ಥಿ ನಿಲಯಗಳಲ್ಲಿ ಪ್ರವೇಶ ದೊರಕದ, ಮೆಟ್ರಿಕ್ ನಂತರದ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮುಸ್ಲಿಂ, ಜೈನ್, ಕ್ರಿಶ್ಚಿಯನ್, ಸಿಖ್, ಭೌಧ್ದ ಮತ್ತು ಪಾರ್ಸಿ ಜನಾಂಗದ ವಿದ್ಯಾರ್ಥಿಗಳಿಗೆ ಊಟ ಮತ್ತು ವಸತಿ ಸೌಲಭ್ಯಕ್ಕೆ ಸಹಾಯಧನಕ್ಕೆ ಅರ್ಜಿ ಸಲ್ಲಿಸುವ ಅವಧಿಯನ್ನು ಮತ್ತೆ ವಿಸ್ತರಿಸಲಾಗಿದೆ.
ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ವ್ಯಾಸಂಗ ಮಾಡುವ ಕಾಲೇಜಿನಿಂದ ಕನಿಷ್ಠ 5ಕಿ.ಮಿ ದೂರದಲ್ಲಿರಬೇಕು, ಒಂದೇ ನಗರದ ವ್ಯಾಪ್ತಿಯಲ್ಲಿರುವವರು ಅರ್ಹರಿರುವುದಿಲ್ಲ. ಅರ್ಜಿಯನ್ನು ಸೇವಾಸಿಂಧು ಅಥವಾ ಇಲಾಖಾ ವೆಬ್‌ಸೈಟ್ https://dom.karnataka.gov.in/dakshina_kannada/publicನಲ್ಲಿರುವ ಲಿಂಕ್ ಮೂಲಕ ಭರ್ತಿಮಾಡಿ ಅರ್ಜಿಯ ಜೊತೆ ದೃಢೀಕೃತ ದಾಖಲಾತಿಗಳನ್ನು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಯ ಕಚೇರಿ, ಮೌಲಾನಾ ಆಝಾದ್ ಭವನ, ಓಲ್ಡ್‌ಕೆಂಟ್‌ರಸ್ತೆ, ಪಾಂಡೇಶ್ವರ, ಮಂಗಳೂರು ಇವರಿಗೆ ಜ.10ರೊಳಗೆ ಸಲ್ಲಿಸಬೇಕು.
ಮಾಹಿತಿಗೆ ಸಹಾಯವಾಣಿ ಸಂಖ್ಯೆ:(24x7)8277799990ನ್ನು ಸಂಪರ್ಕಿಸುವಂತೆ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.