×
Ad

ದುಬಾರೆ ಅರಣ್ಯದಲ್ಲಿ ರೆಸಾರ್ಟ್ ನಿರ್ಮಾಣ ಪ್ರಶ್ನಿಸಿ ಪಿಐಎಲ್: ಅರ್ಜಿದಾರರಿಗೆ 50 ಸಾವಿರ ರೂ. ದಂಡ ವಿಧಿಸಿದ ಹೈಕೋರ್ಟ್

Update: 2022-01-04 22:57 IST

ಬೆಂಗಳೂರು, ಜ.4: ಕೊಡಗು ಜಿಲ್ಲೆಯ ದುಬಾರೆ ಮೀಸಲು ಅರಣ್ಯ ಪ್ರದೇಶದಲ್ಲಿ ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ(ಕೆಎಸ್‍ಟಿಡಿಸಿ) ಅಕ್ರಮವಾಗಿ 'ಜಂಗಲ್ ಲಾಡ್ಜ್ ಮತ್ತು ರೆಸಾರ್ಟ್' ನಡೆಸುತ್ತಿದೆ ಎಂದು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿರುವ ಹೈಕೋರ್ಟ್, ಅರ್ಜಿದಾರರಿಗೆ 50 ಸಾವಿರ ರೂಪಾಯಿ ದಂಡ ವಿಧಿಸಿದೆ.

ಈ ಕುರಿತು ಕೊಡಗಿನ ಪಿ.ಎಸ್.ಮೋಹನ್ ಹಾಗೂ ಇತರೆ ಐವರು ಸಲ್ಲಿಸಿದ್ದ ಪಿಐಎಲ್ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಈ ಆದೇಶ ನೀಡಿದೆ. ದಂಡದ ಮೊತ್ತವನ್ನು ಒಂದು ತಿಂಗಳಲ್ಲಿ ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರಕ್ಕೆ ಪಾವತಿಸುವಂತೆ ಸೂಚಿಸಿದೆ.

ಅರ್ಜಿದಾರರು ಹೇಳಿರುವಂತೆ ಕೊಡಗು ಜಿಲ್ಲೆಯ ದುಬಾರೆ ಪ್ರದೇಶದಲ್ಲಿ ಖಾಸಗಿ ಸಂಸ್ಥೆಗಳು ಜಂಗಲ್ ಲಾಡ್ಜ್ ಮತ್ತು ರೆಸಾರ್ಟ್ಸ್ ನಿರ್ಮಿಸಲು ಕೇಂದ್ರ ಸರಕಾರದಿಂದ ಪೂರ್ವಾನುಮತಿ ಪಡೆಯಬೇಕಿಲ್ಲ. ಈ ಜಾಗ ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ (ಕೆಎಸ್‍ಟಿಡಿಸಿ) ನಿಯಂತ್ರಣಕ್ಕೆ ಒಳಪಟ್ಟಿದ್ದು, ಸಂಪೂರ್ಣ ರಾಜ್ಯ ಸರಕಾರದ ಆಡಳಿತಕ್ಕೆ ಸೇರುತ್ತದೆ. ಆದರೂ ಅರ್ಜಿದಾರರು ದುರುದ್ದೇಶದಿಂದ ಪ್ರತಿವಾದಿಗಳ ಮೇಲೆ ಒತ್ತಡ ತರಲು ಪಿಐಎಲ್ ಸಲ್ಲಿಸಿದ್ದಾರೆ. ನ್ಯಾಯಾಲಯದ ಸಮಯ ಹಾಳು ಮಾಡಿದ್ದರಿಂದ ಅವರಿಗೆ 50 ಸಾವಿರ ರೂ. ದಂಡ ವಿಧಿಸಿಲಾಗುತ್ತಿದೆ ಎಂದು ಆದೇಶ ಹೊರಡಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News