×
Ad

ಕೋವಿಡ್ ನಿರ್ವಹಣೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲು ಕಾರ್ಯಕರ್ತರಿಗೆ ಸಿಎಂ ಬಸವರಾಜ ಬೊಮ್ಮಾಯಿ ಕರೆ

Update: 2022-01-05 16:11 IST

ಬೆಂಗಳೂರು: ಸಾರ್ವಜನಿಕರ ಹಿತದೃಷ್ಟಿಯಿಂದ ಕೋವಿಡ್ ನಿರ್ವಹಣೆಯಲ್ಲಿ ಸಕ್ರಿಯವಾಗಿ ಭಾಗವಹಿಸುವಂತೆ ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಬಿಜೆಪಿ ಕಚೇರಿಯಲ್ಲಿ ಪಕ್ಷದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಸಭೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಕೋವಿಡ್ ರೂಪಾಂತರ ತಳಿ ಒಮೈಕ್ರಾನ್ ಸೋಂಕನ್ನು ಯಾವ ರೀತಿ ನಿರ್ವಹಣೆ ಮಾಡಬೇಕು ಹಾಗೂ ಅದರಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ನಾವು ಸಕ್ರಿಯವಾಗಿ ಭಾಗವಹಿಸಿ ಮಾಹಿತಿ ನೀಡುವುದು, ಕ್ವಾರಂಟೈನ್ ನಲ್ಲಿ ಮಾರ್ಗದರ್ಶನ, ಆಂಬ್ಯುಲೆನ್ಸ್  ನಿರ್ವಹಣೆ, ಲಸಿಕೆ ಅಭಿಯಾನ ಮುಂತಾದ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸಬೇಕೆಂಬ ಕರೆಯನ್ನು ಕಾರ್ಯಕರ್ತರಿಗೆ ನೀಡಲಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News