ಹಿಜಾಬ್ ವಿವಾದ: ರಾಜ್ಯ ಅಲ್ಪಸಂಖ್ಯಾತ ಆಯೋಗಕ್ಕೆ ದೂರು
Update: 2022-01-05 19:57 IST
ಬೆಂಗಳೂರು, ಜ.5: ಹಿಜಾಬ್ ಧರಿಸಿದ್ದಕ್ಕಾಗಿ ಮುಸ್ಲಿಂ ವಿದ್ಯಾರ್ಥಿಗಳನ್ನು ತರಗತಿಗಳಿಂದ ಹೊರಹಾಕಿದ ಉಡುಪಿಯ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗಕ್ಕೆ ಕ್ಯಾಂಪಸ್ ಫ್ರಂಟ್ ನಿಯೋಗವು ದೂರು ಸಲ್ಲಿಸಿತು.
ಕ್ಯಾಂಪಸ್ ಫ್ರಂಟ್ ಕರ್ನಾಟಕ ರಾಜ್ಯ ಸಮಿತಿ ಸದಸ್ಯ ಝುಬೈರ್ ನೇತೃತ್ವದ ನಿಯೋಗವು ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗದ ಕಚೇರಿಗೆ ಭೇಟಿ ನೀಡಿ, ಮಾತುಕತೆ ನಡೆಸಿ ದೂರನ್ನು ನೀಡಿದರು. ಕೂಡಲೇ ಕಾಲೇಜು ಪ್ರಾಂಶು ಪಾಲರ ವಿರುದ್ಧ ಕ್ರಮಕೈಗೊಳ್ಳಬೇಕು ಹಾಗೂ ವಿದ್ಯಾರ್ಥಿಗಳನ್ನು ತರಗತಿಯೊಳಗೆ ಬಿಡುವಂತೆ ಒತ್ತಾಯಿಸಿದರು.
ನಿಯೋಗದಲ್ಲಿ ಮುಹೀನ್ ಮಾಗಡಿ, ನಿಝಾಮ್ ಬೆಂಗಳೂರು ಹಾಗೂ ಇತರ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.