×
Ad

ಇ-ಕೆವೈಸಿ ನೋಂದಣಿಗೆ ಜ.10 ಕೊನೆಯ ದಿನ

Update: 2022-01-05 20:07 IST

ಉಡುಪಿ, ಜ.5: ಜಿಲ್ಲೆಯಲ್ಲಿ ಈವರೆಗೆ ಇ-ಕೆವೈಸಿ ಆಗದೇ ಇರುವ ಪಡಿತರ ಚೀಟಿದಾರರಿಗೆ ಇ-ಕೆವೈಸಿ ಮಾಡಿಸಲು ಜನವರಿ 10 ಕೊನೆಯ ದಿನವಾಗಿದ್ದು, ಇ-ಕೆವೈಸಿ ಆಗದೆ ಇರುವ ಪಡಿತರ ಚೀಟಿಯ ಸದಸ್ಯರು ತಮ್ಮ ವ್ಯಾಪ್ತಿಯ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ, ತಮ್ಮ ಬೆರಳಚ್ಚು ನೊಂದಾಯಿಸಿ ಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಪಡಿತರ ಚೀಟಿದಾರರು ಜಾತಿ ಪ್ರಮಾಣ ಪತ್ರ, ಅನಿಲ ಸಂಪರ್ಕ ಹೊಂದಿರುವ ಪಡಿತರ ಚೀಟಿದಾರರು ಅನಿಲ ಸಂಪರ್ಕದ ಮಾಹಿತಿ ಮತ್ತು ಮೊಬೈಲ್ ದೂರವಾಣಿ ಸಂಖ್ಯೆಯ ಮಾಹಿತಿಯನ್ನು ಇ-ಕೆವೈಸಿ ಮಾಡಲು ನ್ಯಾಯಬೆಲೆ ಅಂಗಡಿಗೆ ಬರುವಾಗ ಕಡ್ಡಾಯವಾಗಿ ತರಬೇಕು.

ಜನವರಿ 10ರ ಒಳಗೆ ಇ-ಕೆವೈಸಿ ಮಾಡದೇ ಇರುವ ಪಡಿತರ ಚೀಟಿ ಮತ್ತು ಸದಸ್ಯರನ್ನು ಸರಕಾರದ ನಿರ್ದೇಶನದಂತೆ ಅಮಾನತುಗೊಳಿಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News