×
Ad

ಕಣ್ಣೂರು ದಯಂಬು: ಶಾಲಾ ಕೊಠಡಿ ಉದ್ಘಾಟನೆ

Update: 2022-01-05 20:15 IST

ಮಂಗಳೂರು, ಜ.5: ಶಿಕ್ಷಣ ವ್ಯವಸ್ಥೆಯನ್ನು ಆಧುನೀಕರಣಗೊಳಿಸಿ ಕ್ಷೇತ್ರದ ಎಲ್ಲಾ ವರ್ಗದ ಮಕ್ಕಳಿಗೂ ಶಿಕ್ಷಣ ನೀಡುವ ಗುರಿ ಇದೆ. ಸ್ಮಾರ್ಟ್ ಸಿಟಿ ಯೋಜನೆಯಡಿ ಈಗಾಗಲೇ ನವೀಕರಣಗೊಂಡ ಶಾಲೆಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು, ಮುಂದಿನ ದಿನಗಳಲ್ಲಿ ಎಲ್ಲಾ ಸರಕಾರಿ ಶಾಲೆಗಳನ್ನು ಅಭಿವೃದ್ಧಿಪಡಿಸಲಾಗುವುದು ಎಂದು ಶಾಸಕ ವೇದವ್ಯಾಸ ಕಾಮತ್ ಹೇಳಿದರು.

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಣ್ಣೂರು ವಾರ್ಡಿನ ದಯಂಬು ಸರಕಾರಿ ಪ್ರೌಢಶಾಲೆಯಲ್ಲಿ 35 ಲಕ್ಷ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿದ ಶಾಲಾ ಕೊಠಡಿಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಪಾಲಿಕೆ ಮುಖ್ಯ ಸಚೇತಕ ಸುಧೀರ್ ಶೆಟ್ಟಿ ಕಣ್ಣೂರು ಮಾತನಾಡಿದರು. ಕಾರ್ಪೊರೇಟರ್ ಚಂದ್ರಾವತಿ ವಿಶ್ವನಾಥ್ ಸಭಾಧ್ಯಕ್ಷತೆ ವಹಿಸಿದ್ದರು.

ಈ ಸಂದರ್ಭ ಬಿಜೆಪಿ ಮುಖಂಡರಾದ ಗೀತಾನಂದ ಶೆಟ್ಟಿ, ದೇವದಾಸ್ ಶೆಟ್ಟಿ, ಯಶವಂತ್ ವೀರನಗರ, ಸುನಿಲ್ ಕೊಡಕ್ಕಲ್, ಜಗದೀಶ್ ಕೊಟ್ಟಾರಿ ಬಲ್ಲೂರು, ಇಕ್ಬಾಲ್ ಬಲ್ಲೂರುಗುಡ್ಡೆ, ಎಸ್.ಡಿ ಶಾಕಿರ್ ದಯಾಂಬು, ಕಬೀರ್ ಬಲ್ಲೂರುಗುಡ್ಡೆ, ಕಟ್ಟಡ ನಿರ್ಮಾಣಕ್ಕೆ ಸ್ಥಳ ಒದಗಿಸಿದ ಹಾಜಿ ಮಹಮ್ಮದ್, ಮಾಜಿ ತಾಪಂ ಸದಸ್ಯ ಅಹ್ಮದ್ ಬಾವಾ, ದಯಾಂಬು ಮಸೀದಿಯ ಅಧ್ಯಕ್ಷ ಮುಹಮ್ಮದ್, ಶಿಕ್ಷಣ ಇಲಾಖೆಯ ಅಧಿಕಾರಿ ಪ್ರಶಾಂತ್ ಉಪಸ್ಥಿತರಿದ್ದರು.

ಪ್ರೌಢಶಾಲಾ ಮುಖ್ಯ ಶಿಕ್ಷಕ ಪೌಲ್ ರೋಡ್ರೀಗಸ್ ಸ್ವಾಗತಿಸಿದರು. ಹರಿಣಾಕ್ಷಿ ಕಾರ್ಯಕ್ರಮ ನಿರೂಪಿಸಿದರು, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಸುಶೀಲಾ ಭಾಯಿ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News