×
Ad

ಪಿಲಿಕುಳದಲ್ಲಿ ಸೆಣಬು ಉತ್ಪನ್ನಗಳ ತಯಾರಿ ತರಬೇತಿ, ಮಾರಾಟಕ್ಕೆ ಚಿಂತನೆ: ಡಿಸಿ ಡಾ.ರಾಜೇಂದ್ರ

Update: 2022-01-05 20:23 IST

ಮಂಗಳೂರು, ಜ.5: ನಗರದ ಹೊರವಲಯದ ಪಿಲಿಕುಳ ಕರಕುಶಲ ಗ್ರಾಮದಲ್ಲಿ ಸೆಣಬು ಉತ್ಪನ್ನ ತಯಾರಿಕೆ ಕುರಿತ ತರಬೇತಿ ಹಾಗೂ ಮಾರಾಟ ಕೇಂದ್ರವನ್ನು ತೆರೆಯುವ ಬಗ್ಗೆ ಚಿಂತನೆ ನಡೆಸಲಾಗುವುದು ಎಂದು ದ.ಕ.ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ತಿಳಿಸಿದರು.

ನಗರದ ವುಡ್‌ಲ್ಯಾಂಡ್ ಹೋಟೆಲ್‌ನಲ್ಲಿ ಕೇಂದ್ರ ಟೆಕ್ಸ್‌ಟೈಲ್ ಸಚಿವಾಲಯದ ವತಿಯಿಂದ ಸೆಣಬು ಬೋರ್ಡ್ ಆಯೋಜಿಸಿದ ಸೆಣಬು ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಬುಧವಾರ ಚಾಲನೆ ನೀಡಿ ಅವರು ಮಾತನಾಡಿದರು.

ಸೆಣಬು ಪ್ಲಾಸ್ಟಿಕ್‌ಗೆ ಪರ್ಯಾಯವಾಗಿದೆ, ಪ್ಲಾಸ್ಟಿಕ್ ಬದಲು ಸೆಣಬು ಉತ್ಪನ್ನಗಳನ್ನು ಸಾಧ್ಯವಾದಷ್ಟು ಮಟ್ಟಿಗೆ ಖರೀದಿಸಿ ಉತ್ತೇಜಿಸಬೇಕು. ಈ ನಿಟ್ಟಿನಲ್ಲಿ ಪಿಲಿಕುಳ ಕರಕುಶಲ ಗ್ರಾಮದಲ್ಲಿ ಸೆಣಬು ಉತ್ಪನ್ನ ತಯಾರಿಕೆ, ಪ್ರದರ್ಶನ ಹಾಗೂ ಮಾರಾಟ ಕೇಂದ್ರ ತೆರೆಯಲು ಕ್ರಮ ಕೈಗೊಳ್ಳಲಾಗುವುದು ಎಂದು ರಾಜೇಂದ್ರ ಕೆ.ವಿ. ಹೇಳಿದರು.

ಈ ಬಗ್ಗೆ ಸೆಣಬು ಬೋರ್ಡ್, ರಾಷ್ಟ್ರೀಯ ಸೆಣಬು ಅಭಿವೃದ್ಧಿ ಕಾರ್ಯಕ್ರಮ, ನಬಾರ್ಡ್, ಪಿಲಿಕುಳ ನಿಸರ್ಗಧಾಮ ಪ್ರಾಧಿಕಾರ, ಹಾಗೂ ಇತರೆ ಇಲಾಖೆಗಳ ಸಹಭಾಗಿತ್ವದಲ್ಲಿ ಪಿಲಿಕುಳದಲ್ಲೇ ಸೆಣಬು ಉತ್ಪನ್ನ ಸಿದ್ಧಪಡಿಸಲು ತರಬೇತಿ ನೀಡಲಾಗುವುದು ಎಂದರು.

ಸೆಣಬು ಬೋರ್ಡ್ ನಿರ್ದೇಶಕ ಟಿ.ಅಯ್ಯಪ್ಪನ್ ಮಾತನಾಡಿ, ಜ.10ರವರೆಗೆ ಬೆಳಗ್ಗೆ 10ರಿಂದ ರಾತ್ರಿ 8 ಗಂಟೆಯವರೆಗೆ ಸೆಣಬು ಮೇಳ ಪ್ರದರ್ಶನ, ಮಾರಾಟ ಇರುತ್ತದೆ. 21 ಸ್ಟಾಲ್‌ಗಳ ಪೈಕಿ ಮೂರು ಸ್ಟಾಲ್‌ಗಳು ಕರ್ನಾಟಕದ್ದಾಗಿರುತ್ತದೆ. ಉಳಿದ ಸ್ಟಾಲ್‌ಗಳು ತಮಿಳ್ನಾಡು, ಪಶ್ಚಿಮ ಬಂಗಾಲ ಮತ್ತಿತರ ರಾಜ್ಯಗಳದ್ದಾಗಿದೆ. ಕವರಿಂಗ್ಸ್, ಹ್ಯಾಂಡ್, ಶಾಪಿಂಗ್ ಬ್ಯಾಗ್ಸ್, ಗಿಫ್ಟ್ ಐಟಂಗಳು, ಡೆಕೊರೇಟಿವ್ ಫ್ಯಾಬ್ರಿಕ್ಸ್ ಸೇರಿದಂತೆ ಧ ಬಗೆಯಗೃಹೋಪಯೋಗಿ ಸೆಣಬು ಉತ್ಪನ್ನಗಳು ಲಭ್ಯರುತ್ತದೆ. ಗ್ರಾಹಕರು ಪರಿಸರ ಸ್ನೇಹಿ ಸೆಣಬು ಉತ್ಪನ್ನವನ್ನು ಖರೀದಿಸಿ ಪ್ರೋತ್ಸಾಹಿಸುವಂತೆ ಮನವಿ ಮಾಡಿದರು.

ನಬಾರ್ಡ್ ಅಧಿಕಾರಿ ಸಂಗೀತಾ, ತೋಟಗಾರಿಕಾ ಇಲಾಖೆಯ ಉಪನಿರ್ದೇಶಕ ಪ್ರವೀಣ್‌ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News