ಮಂಗಳೂರು ವಿವಿ ಕಂಪ್ಯೂಟರ್ ಖರೀದಿ ಹಗರಣ ಆರೋಪ ; ಲೋಕಾಯುಕ್ತ ತನಿಖೆಗೆ ಸಿಎಫ್ಐ ಆಗ್ರಹ
ಮಂಗಳೂರು : ಮಂಗಳೂರು ವಿ.ವಿ. ಕಂಪ್ಯೂಟರ್ ಖರೀದಿಯಲ್ಲಿ ಅವ್ಯವಹಾರ ನಡೆದಿರುವ ಆರೋಪ ಇದ್ದು, ಈ ಬಗ್ಗೆ ಲೋಕಾಯುಕ್ತ ತನಿಖೆ ನಡೆಸಬೇಕೆಂದು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ ರಾಜ್ಯ ಕೋಶಾಧಿಕಾರಿ ಸವಾದ್ ಕಲ್ಲರ್ಪೆ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.
ರಾಜ್ಯದ ಪ್ರತಿಷ್ಠಿತ ವಿಶ್ವವಿದ್ಯಾಲಯಗಳಲ್ಲೊಂದಾದ ಮಂಗಳೂರು ವಿಶ್ವವಿದ್ಯಾಲಯವು ಹಲವಾರು ಸಮಸ್ಯೆಗಳ ಆಗರವಾಗಿ ಪರಿಣಮಿಸುತ್ತಿದೆ. ದೇಶ, ವಿದೇಶಗಳಿಂದ ಹಲವಾರು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿರುವ ಮಂಗಳೂರು ವಿಶ್ವವಿದ್ಯಾಲಯದ ಅವ್ಯವಸ್ಥೆಗಳ ಬಗ್ಗೆ ರಾಜ್ಯಪಾಲರು ಕುಲಪತಿಗಳ ಸಭೆಯಲ್ಲಿ ಪ್ರಶ್ನಿಸಿ ಸಮಸ್ಯೆಯನ್ನು ಸರಿಪಡಿಸಲು ಸೂಚಿಸಿದ ಘಟನೆ ನಡೆದಿದೆ. ಅವ್ಯವಹಾರ ಮತ್ತು ಭ್ರಷ್ಟಾಚಾರ ಆರೋಪಗಳು ದೊಡ್ಡ ಮಟ್ಟದಲ್ಲಿ ಕೇಳಿ ಬರುತ್ತಿದೆ. ಸರ್ಕಾರ ಈ ಬಗ್ಗೆ ಸರಿಯಾದ ತನಿಖೆ ನಡೆಸಲು ಸಮಿತಿ ರಚಿಸಬೇಕು. ಆ ಮೂಲಕ ವಿಶ್ವವಿದ್ಯಾಲಯವನ್ನು ಅಭಿವೃದ್ಧಿ ಪತದತ್ತ ಕೊಂಡೊಯ್ಯಲು ಈ ಮೂಲಕ ಆಗ್ರಹಿಸುತ್ತಿರುವುದಾಗಿ ತಿಳಿಸಿದರು. ಹಾಗು ಇತರ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಲಾಯಿತು.
ಈ ಸಂದರ್ಭ ಸಿಎಫ್ಐ ಜಿಲ್ಲಾ ಮುಖಂಡ ರಿಯಾಝ್ ಅಂಕತ್ತಡ್ಕ, ಮಂಗಳೂರು ನಗರಾಧ್ಯಕ್ಷ ಸರಫುದ್ದೀನ್, ಗ್ರಾಮಾಂತರ ಅಧ್ಯಕ್ಷ ಅಶ್ರಫ್ ಪೊರ್ಕೊಡಿ, ವಿವಿ ಮುಖಂಡ ಮುನೀರ್ ಬಜಾಲ್ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.