×
Ad

ಪ್ರತ್ಯೇಕ ಪ್ರಕರಣ: ಇಬ್ಬರ ಆತ್ಮಹತ್ಯೆ

Update: 2022-01-05 21:44 IST

ಕಾರ್ಕಳ, ಜ.5: ವಿಪರೀತ ಶರಾಬು ಕುಡಿಯುವ ಚಟ ಹಾಗೂ ಅನಾರೋಗ್ಯ ದಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಬೋಳ ಗ್ರಾಮದ ಬಲ್ಯಾರ್‌ ದಡ್ಡು ನಿವಾಸಿ ಸುರೇಶ್ ಶೆಟ್ಟಿ (52) ಎಂಬವರು ಜೀವನದಲ್ಲಿ ಜಿಗುಪ್ಸೆ ಹೊಂದಿ ಡಿ.4ರಂದು ಮಧ್ಯಾಹ್ನ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬ್ರಹ್ಮಾವರ: ವೈಯಕ್ತಿಕ ಕಾರಣಕ್ಕೆ ಮಾನಸಿಕವಾಗಿ ನೊಂದು ಜೀವನದಲ್ಲಿ ಜಿಗುಪ್ಸೆಗೊಂಡ ಕಾಡೂರು ಹೆಗ್ಗಡ್ಡು ನಿವಾಸಿ ಗಣಪತಿ ಆಚಾರ್(40) ಎಂಬ ವರು ಜ.4ರಂದು ರಾತ್ರಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News