​ವಿಧಾನಸೌಧ, ವಿಕಾಸಸೌಧಕ್ಕೆ ಸಾರ್ವಜನಿಕ ಪ್ರವೇಶ ನಿರ್ಬಂಧ

Update: 2022-01-05 17:19 GMT

ಬೆಂಗಳೂರು, ಜ. 5: ಕೋವಿಡ್ ರೂಪಾಂತರಿ ಒಮೈಕ್ರಾನ್ ಹರಡುವಿಕೆ ತಡೆಗಟ್ಟಲು ಸಚಿವಾಲಯದ ಅಧಿಕಾರಿಗಳು ಮತ್ತು ಸಿಬ್ಬಂದಿ ಆರೋಗ್ಯದ ದೃಷ್ಟಿಯಿಂದ ವಿಧಾನಸೌಧ, ವಿಕಾಸಸೌಧ ಮತ್ತು ಬಹುಮಹಡಿ ಕಟ್ಟಡಗಳಿಗೆ ಸಾರ್ವಜನಿಕ ಪ್ರವೇಶವನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ನಿರ್ಬಂಧಿಸಲಾಗಿದೆ ಎಂದು ಸರಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಸುತ್ತೋಲೆ ಹೊರಡಿಸಿದ್ದಾರೆ.

ಮುಂಚಿತವಾಗಿ ನಿಗದಿಪಡಿಸಲಾದ ಭೇಟಿಗೆ ಮಾತ್ರ ಆಗಮಿಸುವ ಇಲಾಖೆ ಮುಖ್ಯಸ್ಥರು/ಸಿಬ್ಬಂದಿ ಹಾಗೂ ಸಾರ್ವಜನಿಕರು ಎರಡನೆ ಡೋಸ್ ಲಸಿಕೆ ಪಡೆದಿರುವ ಪ್ರಮಾಣ ಪತ್ರವನ್ನು ಹೊಂದಿರತಕ್ಕದ್ದು. ಸಚಿವಾಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪ್ರತಿಯೊಬ್ಬ ಅಧಿಕಾರಿ/ಸಿಬ್ಬಂದಿ ಎರಡನೆ ಡೋಸ್ ಕೋವಿಡ್ ಲಸಿಕೆ ಪಡೆದಿರುವ ಪ್ರಮಾಣ ಪತ್ರ ಹೊಂದಿ, ಕಚೇರಿಗೆ ಆಗಮಿಸುವುದು. ಇಲ್ಲದಿದ್ದಲ್ಲಿ ಅಂತಹವರ ಗೈರು ಹಾಜರಿಯನ್ನು ವೇತನ ರಹಿತ ರಜೆ ಎಂದು ಪರಿಗಣಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಈ ಸಂಬಂಧ ಪೊಲೀಸ್ ಇಲಾಖೆ, ಸ್ವಾಗತ ಕೇಂದ್ರ ಮತ್ತು ಭದ್ರತಾಧಿಕಾರಿಗಳು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಸಚಿವಾಲು ಕಟ್ಟಡಗಳಿಗೆ ಆಗಮಿಸುವ ಇಲಾಖೆ/ಕಚೇರಿಗಳಿಂದ ನೀಡಲಾಗುವ ಪೂರ್ವಾನುಮತಿ ಪತ್ರ, ಸಭಾ ಸೂಚನಾ ಪತ್ರ ಹಾಗೂ ಎರಡನೆ ಡೋಸ್ ಕೋವಿಡ್ ಲಸಿಕೆ ಪಡೆದಿರುವ ಪ್ರಮಾಣ ಪತ್ರವನ್ನು ಖಚಿತಪಡಿಸಿಕೊಂಡ ತರುವಾಯವಷ್ಟೇ ಪ್ರವೇಶಕ್ಕೆ ಅನುತಿ ನೀಡಬೇಕು. ಪ್ರತಿಯೊಂದು ಕಟ್ಟಡಗಳಲ್ಲಿನ ಪ್ರತಿ ಮಹಡಿ/ಕಾರಿಡಾರ್‌ನಲ್ಲಿ ಒಟ್ಟಾಗಿ ಗುಂಪು ಸೇರದಂತೆ ನಿಗಾವಹಿಸಬೇಕು ಎಂದು ಅವರು ಸುತ್ತೋಲೆಯಲ್ಲಿ ನಿರ್ದೇಶನ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News