ಐಸಿಸಿ ಮಹಿಳಾ ಕ್ರಿಕೆಟ್ ವಿಶ್ವಕಪ್-‌2022: ಭಾರತ ತಂಡವನ್ನು ಪ್ರಕಟಿಸಿದ ಬಿಸಿಸಿಐ

Update: 2022-01-06 10:30 GMT

ಹೊಸದಿಲ್ಲಿ: ಮಾರ್ಚ್ 4 ರಿಂದ ಏಪ್ರಿಲ್ 3 ರವರೆಗೆ ನ್ಯೂಝಿಲೆಂಡ್‌ನಲ್ಲಿ ನಡೆಯಲಿರುವ ಐಸಿಸಿ ಏಕದಿನ ವಿಶ್ವಕಪ್‌ಗಾಗಿ ಪ್ರಕಟಿಸಲಾದ 15 ಸದಸ್ಯರ ಭಾರತೀಯ ಮಹಿಳಾ ಕ್ರಿಕೆಟ್ ತಂಡದಿಂದ ಸ್ಟಾರ್ ಬ್ಯಾಟರ್ ಜೆಮಿಮಾ ರಾಡ್ರಿಗಸ್ ಅವರನ್ನು ಗುರುವಾರ ಕೈಬಿಡಲಾಗಿದೆ. 

ಹರ್ಮನ್‌ಪ್ರೀತ್ ಕೌರ್ ಉಪನಾಯಕಿಯಾಗಿ, ಅನುಭವಿ ಮಿಥಾಲಿ ರಾಜ್ ತಂಡವನ್ನು ಮುನ್ನಡೆಸಲಿದ್ದಾರೆ. ತಂಡದಲ್ಲಿ ಅನುಭವಿ ಆಟಗಾರರಾದ ಸ್ಮೃತಿ ಮಂಧಾನ, ಜೂಲನ್ ಗೋಸ್ವಾಮಿ ಮತ್ತು ಯುವ ಆಟಗಾರ್ತಿ ಶಫಾಲಿ ವರ್ಮಾ ಇತರರು ಇದ್ದಾರೆ. ಆದರೆ, ಫಾರ್ಮ್ ಕೊರತೆಯಿಂದಾಗಿ ರಾಡ್ರಿಗಸ್ ಮತ್ತು ಆಲ್ ರೌಂಡರ್ ಶಿಖಾ ಪಾಂಡೆ ಅವರನ್ನು ಕಡೆಗಣಿಸಲಾಗಿದೆ ಎಂದು ತಿಳಿದು ಬಂದಿದೆ.

ಅದೇ 14 ಸದಸ್ಯರ ತಂಡವು ಫೆಬ್ರವರಿ 9 ರಿಂದ 24 ರವರೆಗೆ ನ್ಯೂಜಿಲೆಂಡ್ ವಿರುದ್ಧ ಒಂದು ಟಿ 20 ಅಂತರರಾಷ್ಟ್ರೀಯ ಮತ್ತು ಐದು ODI ಗಳನ್ನು ಒಳಗೊಂಡಿರುವ ಸೀಮಿತ ಓವರ್‌ಗಳ ಸರಣಿಯಲ್ಲಿ ಸಹ ಭಾಗಿಯಾಗಲಿದೆ.

ಮಿಥಾಲಿ ರಾಜ್ (ನಾಯಕಿ), ಹರ್ಮನ್‌ಪ್ರೀತ್ ಕೌರ್ (ಉ.ನಾಯಕಿ), ಸ್ಮೃತಿ ಮಂಧಾನ, ಶಫಾಲಿ ವರ್ಮಾ, ಯಾಸ್ತಿಕಾ ಭಾಟಿಯಾ, ದೀಪ್ತಿ ಶರ್ಮಾ, ರಿಚಾ ಘೋಷ್ (ವಿ.ಕೀ), ಸ್ನೇಹ ರಾಣಾ, ಜೂಲನ್ ಗೋಸ್ವಾಮಿ, ಪೂಜಾ ವಸ್ತ್ರಾಕರ್, ಮೇಘನಾ ಸಿಂಗ್, ರೇಣುಕಾ ಸಿಂಗ್ ಠಾಕೂರ್, ತಾನಿಯಾ ಭಾಟಿಯಾ (ವಿ.ಕೀ), ರಾಜೇಶ್ವರಿ ಗಾಯಕ್ವಾಡ್, ಪೂನಂ ಯಾದವ್.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News