ಪರ್ಯಾಯೋತ್ಸವ ಸುಗಮವಾಗಿ ನಡೆಸಲು ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ನಿರ್ಧಾರ: ಸಿಎಂ
Update: 2022-01-06 18:42 IST
ಉಡುಪಿ, ಜ.6: ಉಡುಪಿ ಪರ್ಯಾಯ ಮಹೋತ್ಸವ ಸುಗಮವಾಗಿ ನಡೆಸಲು ಅನುಕೂಲ ಕಲ್ಪಿಸಲು ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಸವಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ
ಬೆಂಗಳೂರಿನಲ್ಲಿ ಇಂದು ಭೇಟಿಯಾದ ಉಡುಪಿ ಪರ್ಯಾಯೋತ್ಸವ ಸಮಿತಿಯ ಮನವಿಗೆ ಸ್ಪಂದಿಸಿ ಅವರು ಮಾತನಾಡುತಿದ್ದರು. ಇದೇ ಸಂದರ್ಭ ದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು ಸಮಿತಿಯ ಗೌರವ ಕಾರ್ಯಧ್ಯಕ್ಷ ಹಾಗೂ ಶಾಸಕ ಕೆ.ರಘುಪತಿ ಭಟ್ ಆಮಂತ್ರಣ ಪತ್ರ ನೀಡಿ ಪರ್ಯಾಯ ಮಹೋತ್ಸವಕ್ಕೆ ಆಹ್ವಾನಿಸಿದರು.
ಈ ಸಂದರ್ಭದಲ್ಲಿ ಜಲಸಂಪನ್ಮೂಲ ಸಚಿವ ಗೋವಿಂದ ಎಂ.ಕಾರಜೋಳ, ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ, ವಿಧಾನ ಪರಿಷತ್ ಸದಸ್ಯ ರವಿಕುಮಾರ್, ಭಾರತಿ ಶೆಟ್ಟಿ ಮತ್ತು ಪರ್ಯಾಯೋತ್ಸವ ಸಮಿತಿಯ ಉಪಾಧ್ಯಕ್ಷ ಶ್ರೀಪತಿ ಭಟ್ ಉಚ್ಚಿಲ, ಪ್ರಧಾನ ಕಾರ್ಯದರ್ಶಿ ವಿಷ್ಣು ಪ್ರಸಾದ್ ಪಾಡಿಗಾರ್, ಆರ್ಥಿಕ ಸಮಿತಿ ಸಂಚಾಲಕ ಜಯಪ್ರಕಾಶ್ ಕೆದ್ಲಾಯ ಉಪಸ್ಥಿತರಿದ್ದರು.