×
Ad

ಎಸೆಸೆಲ್ಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

Update: 2022-01-06 21:37 IST
ಸಾಂದರ್ಭಿಕ ಚಿತ್ರ

ಬೆಂಗಳೂರು, ಜ.6: ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು ಪ್ರಸಕ್ತ ಶೈಕ್ಷಣಿಕ ವರ್ಷದ ಎಸೆಸೆಲ್ಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಮಾರ್ಚ್ 28ರಿಂದ ಎಪ್ರಿಲ್ 11ರವರೆಗೆ ಪರೀಕ್ಷೆಗಳು ನಡೆಯಲಿವೆ.

ತಾತ್ಕಾಲಿಕ ವೇಳಾಪಟ್ಟಿ ಪ್ರಕಾರ ಮಾರ್ಚ್ 28ರಂದು ಕನ್ನಡ(ಪ್ರಥಮ ಭಾಷೆ), ಮಾರ್ಚ್ 30ರಂದು ಇಂಗ್ಲೀಷ್(ದ್ವೀತಿಯ ಭಾಷೆ), ಎಪ್ರಿಲ್ 1ರಿಂದ ಕೋರ್ ಸಬ್ಜೆಕ್ಟ್ ಇರಲಿವೆ. ಎಪ್ರಿಲ್ 4ರಂದು ಗಣಿತ ಹಾಗೂ ಸಮಾಜಶಾಸ್ತ್ರ, ಎಪ್ರಿಲ್ 6ರಂದು ಸಮಾಜ ವಿಜ್ಞಾನ, ಎಪ್ರಿಲ್ 8ರಂದು ತೃತೀಯ ಭಾಷೆ ಹಿಂದಿ ಪರೀಕ್ಷೆಗಳನ್ನು ನಡೆಸಲು ಶಿಕ್ಷಣ ಮಂಡಳಿ ತಾತ್ಕಾಲಿಕ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. 

ಎಪ್ರಿಲ್ 11ರಂದು ವಿಜ್ಞಾನ, ರಾಜ್ಯಶಾಸ್ತ್ರ, ಕರ್ನಾಟಕ ಸಂಗೀತ /ಹಿಂದೂಸ್ತಾನಿ ಸಂಗೀತ ಪರೀಕ್ಷೆ ನಡೆಯಲಿವೆ. ಪರೀಕ್ಷೆಗಳು ಪ್ರತಿದಿನ ಬೆಳಗ್ಗೆ 10.30ಕ್ಕೆ ಆರಂಭವಾಗಲಿವೆ. ಇಂಜಿನಿಯರಿಂಗ್ ಗ್ರಾಫಿಕ್ಸ್-2, ಕರ್ನಾಟಕ ಸಂಗೀತ /ಹಿಂದೂಸ್ತಾನಿ ಸಂಗೀತ ಪರೀಕ್ಷೆಗಳು ಮಾತ್ರ ಮಧ್ಯಾಹ್ನ 2ಕ್ಕೆ ಆರಂಭವಾಗಲಿವೆ.  ಈ ಸಂಬಂಧ ಏನಾದರೂ ಆಕ್ಷೇಪಣೆಗಳಿದ್ದಲ್ಲಿ ಸಲ್ಲಿಸಲು ಜನವರಿ 6ರಿಂದ 14ರವರೆಗೆ ಕಾಲಾವಕಾಶ ನೀಡಲಾಗಿದೆ.  

ಆಕ್ಷೇಪಗಳನ್ನು www.sslc.karnataka.gov.in ಅಥವಾ dpikseeb@gmail.com ಇ–ಮೇಲ್‌ ಅಥವಾ ನಿರ್ದೇಶಕರು (ಪರೀಕ್ಷೆಗಳು), ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ, 6ನೇ ಅಡ್ಡ ರಸ್ತೆ, ಮಲ್ಲೇಶ್ವರಂ, ಬೆಂಗಳೂರು–560003 ವಿಳಾಸಕ್ಕೆ ಅಂಚೆ ಮೂಲಕ ಸಲ್ಲಿಸಬಹುದಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News