×
Ad

ಉತ್ತಮ ಆರೋಗ್ಯಕ್ಕಾಗಿ ಯೋಗ ಮಾಡಿ: ದ.ಕ.ಜಿಲ್ಲಾಧಿಕಾರಿ ಡಾ.ರಾಜೇಂದ್ರ

Update: 2022-01-07 20:21 IST

ಮಂಗಳೂರು ಜ.7: ಬದುಕಿನ ಪರಿಪೂರ್ಣತೆಗೆ ಯೋಗ ಅತ್ಯಗತ್ಯ, ಉತ್ತಮ ಆರೋಗ್ಯಕ್ಕಾಗಿ ದೈನಂದಿನ ಜೀವನದಲ್ಲಿ ಯೋಗವನ್ನು ಅಳವಡಿಸಿಕೊಳ್ಳಬೇಕು ಎಂದು ದ.ಕ.ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಹೇಳಿದರು.

ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿಯವರ ಮರು ಮುದ್ರಣಗೊಂಡ ‘ಯೋಗ ಆರೋಗ್ಯ’ ಪುಸ್ತಕವನ್ನು ದ.ಕ.ಜಿಪಂನ ನೇತ್ರಾವತಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ಬಿಡುಗಡೆಗೊಳಿಸಿ ಅವರು ಮಾತನಾಡಿದರು.

ಆನ್‌ಲೈನ್‌ನಲ್ಲೂ ಯೋಗ ತರಬೇತಿ ನೀಡಲಾಗುತ್ತಿದೆ. ಆಸಕ್ತರು ಇದರ ಸದುಪಯೋಗ ಪಡೆದುಕೊಳ್ಳಬಹುದು ಎಂದು ಹೇಳಿದರು. ದ.ಕ.ಜಿಪಂ ಸಿಇಒ ಡಾ.ಕುಮಾರ್, ಕೌಶಲ್ಯಾಭಿವೃದ್ದಿ ಅಧಿಕಾರಿ ಹೇಮಚಂದ್ರ, ಡಾ. ಜಗನ್ನಾಥ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News