×
Ad

ಜ.10 ರಂದು ಸಚಿವ ಕೋಟ ಪ್ರವಾಸ

Update: 2022-01-07 21:24 IST

ಉಡುಪಿ, ಜ.7: ರಾಜ್ಯದ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಜ.10 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದು, ಅಂದು 7:30ರಿಂದ 9 ಗಂಟೆಯ ವರೆಗೆ ಕೋಟದ ಗೃಹ ಕಚೇರಿಯಲ್ಲಿ ಸಾರ್ವಜನಿಕರ ಭೇಟಿ ಮತ್ತು ಅಹವಾಲು ಸ್ವೀಕರಿಸಲಿದ್ದಾರೆ.

ಬೆಳಗ್ಗೆ 10ಕ್ಕೆ ಮಣಿಪಾಲ ಜಿಪಂ ಸಭಾಂಗಣದಲ್ಲಿ ಎಸ್.ಸಿ.ಎಸ್.ಪಿ. ಟಿ.ಎಸ್.ಪಿ ಇಲಾಖಾವಾರು ಪ್ರಗತಿ ಪರಿಶೀಲನಾ ಸಭೆ, ಅಪರಾಹ್ನ 12 ಕ್ಕೆ ಬೋವಿ ಜನಾಂಗದ ಜಾತಿ ಪ್ರಮಾಣ ಪತ್ರದ ಸಮಸ್ಯೆ ಕುರಿತು ಶಾಸಕರು ಹಾಗೂ ಅಧಿಕಾರಿಗಳೊಂದಿಗೆ ಸಭೆ, 1 ರಿಂದ 2:30ರವರೆಗೆ ಜಿಪಂನಲ್ಲಿ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸುವರು ಎಂದು ಪ್ರಕಟಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News