×
Ad

ಪೊಲೀಸ್ ಕಾನ್‌ ಸ್ಟೇಬಲ್ ಕುಮಲೇಶ್ ನಿಧನ

Update: 2022-01-07 22:44 IST

ಮಂಗಳೂರು, ಜ.7: ನಗರದ ಸಶಸ್ತ್ರ ಮೀಸಲು ಪೊಲೀಸ್ ಪಡೆಯ (ಸಿಎಆರ್) ಕಾನ್‌ ಸ್ಟೇಬಲ್ ಕುಮಲೇಶ್ ತೊಂಡಿಹಾಳ (24) ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ನಿಧನರಾಗಿದ್ದಾರೆ.

ಮೃತರು ಪತ್ನಿ ಹಾಗೂ ಅಪಾರ ಬಾಂಧವರನ್ನು ಅಗಲಿದ್ದಾರೆ.

ರಾಯಚೂರು ಜಿಲ್ಲೆಯ ಲಿಂಗನಸೂರಿನವರಾದ ಕಮಲೇಶ್ ಮಂಗಳೂರಿನಲ್ಲಿ ಕಳೆದ 5 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದರು. ಅಸೌಖ್ಯದ ಹಿನ್ನೆಲೆಯಲ್ಲಿ ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News