ವಾರಾಂತ್ಯದಲ್ಲಿ ಮದ್ಯ ಮಾರಾಟ ಬಂದ್: ಸಚಿವ ಕೆ.ಗೋಪಾಲಯ್ಯ
Update: 2022-01-08 00:05 IST
ಬೆಂಗಳೂರು, ಜ. 7: ರಾಜ್ಯದಲ್ಲಿ ಕೋವಿಡ್ ರೂಪಾಂತರಿ ವೈರಸ್ ಸೋಂಕು ನಿಯಂತ್ರಣಕ್ಕೆ ವಾರಾಂತ್ಯದ ಕಫ್ರ್ಯೂ ಹೇರಿದ್ದು, ಬಾರ್, ರೆಸ್ಟೋರೆಂಟ್‍ಗಳನ್ನು ಶುಕ್ರವಾರ ರಾತ್ರಿ 8 ಗಂಟೆಯಿಂದ ಸೋಮವಾರ ಬೆಳಗ್ಗೆ 5ಗಂಟೆಯ ವರೆಗೆ ಮುಚ್ಚಲಾಗುತ್ತಿದ್ದು, ಈ ವೇಳೆ ರಾಜ್ಯದಾದ್ಯಂತ ಮದ್ಯ ಮಾರಾಟ ಸಂಪೂರ್ಣ ಬಂದ್ ಮಾಡಲಾಗುವುದು ಎಂದು ಅಬಕಾರಿ ಸಚಿವ ಕೆ.ಗೋಪಾಲಯ್ಯ ತಿಳಿಸಿದ್ದಾರೆ.
ಶುಕ್ರವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕೊರೋನ ಸೋಂಕು ತಡೆಗಟ್ಟಲು ರಾಜ್ಯ ಸರಕಾರ ನಿರ್ಬಂಧ ಹೇರಿದ್ದು, ಬಾರ್ ಮತ್ತು ರೆಸ್ಟೋರೆಂಟ್ ಮಾಲಕರು ಸಹಕರಿಸಬೇಕು. ಎಲ್ಲರೂ ಸರಕಾರದ ಮಾರ್ಗಸೂಚಿ ಪಾಲಿಸಿ ಸೋಂಕು ಹರಡುವುದನ್ನು ತಡೆಗಟ್ಟಬೇಕು ಎಂದು ಸಲಹೆ ಮಾಡಿದರು.