ಬೆಂಗಳೂರು: ಅಡುಗೆ ಅನಿಲ ಸೋರಿಕೆಯಿಂದ ಸ್ಫೋಟ; ಮೂವರಿಗೆ ಗಾಯ

Update: 2022-01-08 11:51 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಜ.8: ಇಲ್ಲಿನ ಅನ್ನಪೂರ್ಣೇಶ್ವರಿ ನಗರದಲ್ಲಿ ಅಡುಗೆ ಅನಿಲ ಸಿಲಿಂಡರ್ ರೀಫಿಲ್ಲಿಂಗ್ ವೇಳೆ ಅನಿಲ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡು ಮೂವರು ಗಾಯಗೊಂಡಿರುವ ಘಟನೆ ಬೆಳಕಿಗೆ ಬಂದಿದೆ.

ಶನಿವಾರ ಬೆಳಗ್ಗೆ ಈ ಘಟನೆ ನಡೆದಿದ್ದು, ಗಾಯಗೊಂಡ ಮೂವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು ಅವರೆಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಡಿಸಿಪಿ ಡಾ.ಸಂಜೀವ್ ಪಾಟೀಲ್ ತಿಳಿಸಿದ್ದಾರೆ. 

ಮೂಡಲಪಾಳ್ಯ ವೃತ್ತದ ಬಳಿಯ ಬೆಟ್ಟಪ್ಪ ಎಂಬುವರ ಮನೆಯೊಂದರಲ್ಲಿ ಅಡುಗೆ ಅನಿಲ ರೀಫಿಲ್ಲಿಂಗ್ ನಡೆಯುತ್ತಿದ್ದ ವೇಳೆ ಸಿಲಿಂಡರ್ ಸೋರಿಕೆ ಆಗಿ ಹೊತ್ತುಕೊಂಡ ಬೆಂಕಿಯಿಂದ ಇಬ್ಬರಿಗೆ ಗಾಯಗಳಾಗಿವೆ. 

ಕೂದಲೆಳೆಯ ಅಂತರದಲ್ಲಿ ಭಾರಿ ಅನಾಹುತ ತಪ್ಪಿದ್ದು ಹತ್ತಾರು ಸಿಲಿಂಡರ್‍ಗಳು ಒಂದೆ ಕಡೆ ಇದ್ದವು. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ. ಸ್ಥಳಕ್ಕೆ ಗೋವಿಂದರಾಜನಗರ ಠಾಣಾ ಪೆÇಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News