ಬೆಂಗಳೂರು: ನಕಲಿ ಕೋವಿಡ್ ವರದಿ; ಇಬ್ಬರ ಬಂಧನ
Update: 2022-01-08 20:32 IST
ಬೆಂಗಳೂರು, ಜ.8: ಕೋವಿಡ್ ಪರೀಕ್ಷೆ ನಡೆಸದೆ ನಕಲಿ ವರದಿಗಳನ್ನು ಹಣಕ್ಕಾಗಿ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿ, ವಿಚಾರಣೆಗೊಳಪಡಿಸಿದ್ದಾರೆ.
ಬಂಧಿತ ಆರೋಪಿಗಳಿಂದ 50ಕ್ಕೂ ಅಧಿಕ ನಕಲಿ ವರದಿಗಳು ಜಪ್ತಿ ಮಾಡಿ, ಇಲ್ಲಿನ ಡಿಜೆಹಳ್ಳಿ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಿಸಲಾಗಿದೆ.
ಹೊರ ರಾಜ್ಯಗಳಿಗೆ ತೆರಳುವ ಪ್ರಯಾಣಿಕರಿಗೆ ರಾಜ್ಯ ಸರಕಾರವೂ ಕೋವಿಡ್ ನೆಗಟಿವ್ ವರದಿ ಕಡ್ಡಾಯಗೊಳಿಸಿದೆ. ಆದರೆ, ಇದನ್ನೆ ಬಂಡವಾಳ ಮಾಡಿಕೊಂಡು ಇಲ್ಲಿನ ಕಾವಲ್ ಬೈರಸಂದ್ರದಲ್ಲಿರುವ ಸ್ಕೈಲೈನ್ ಡಯಾಗ್ನಸ್ಟಿಕ್‍ನಲ್ಲಿ ಆನ್‍ಲೈನ್ ಮೂಲಕ ಹಣ ಪಡೆದು ಯಾವುದೇ ಸ್ವಾಬ್ ಸ್ಯಾಂಪಲ್ ಸಂಗ್ರಹಿಸಿಕೊಳ್ಳದೇ ನೇರವಾಗಿ ಕೋವಿಡ್ ಪರೀಕ್ಷಾ ವರದಿಗಳನ್ನು ನೀಡುತ್ತಿದ್ದರು. ಈ ಸಂಬಂಧ ಮಾಹಿತಿ ಪಡೆದು ಕಾರ್ಯಾಚರಣೆ ನಡೆಸಿದಾಗ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ ಎಂದು ಸಿಸಿಬಿ ಹಿರಿಯ ಪೊಲೀಸ್ ಅಧಿಕಾರಿವೊಬ್ಬರು ತಿಳಿಸಿದ್ದಾರೆ.