×
Ad

ಸಕಾಲ ಮಿತ್ರರ ನೇಮಕ ಸಕಾಲ ಮಿತ್ರರ ನೇಮಕ

Update: 2022-01-08 20:37 IST

ಉಡುಪಿ, ಜ.8: ನಾಗರಿಕರಿಗೆ ನಿಗದಿತ ಕಾಲಮಿತಿಯಲ್ಲಿ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ಸಕಾಲ ಯೋಜನೆಯನ್ನು ಪ್ರಾರಂಭಿಸಲಾಗಿದ್ದು, ಈ ಯೋಜನೆಯಲ್ಲಿ ಪ್ರಸ್ತುತ 99 ಇಲಾಖೆ/ ಸಂಸ್ಥೆಗಳ 1115 ಸೇವೆಗಳನ್ನು ಸೇರ್ಪಡೆ ಮಾಡಲಾಗಿದೆ.

ನಾಗರಿಕರಲ್ಲಿ ಸಕಾಲ ಸೇವೆಗಳ ಕುರಿತು ಅರಿವು ಮೂಡಿಸುವ ಸಲುವಾಗಿ ಜಿಲ್ಲಾ ವ್ಯಾಪ್ತಿಯಲ್ಲಿ ಆಸಕ್ತಿ ಇರುವ ವ್ಯಕ್ತಿಗಳನ್ನು ಯಾವುದೇ ಶೈಕ್ಷಣಿಕ ಸಂಸ್ಥೆ ಅಥವಾ ಸರ್ಕಾರೇತರ ಸಂಸ್ಥೆ (ಎನ್‌ಜಿಓ) ಮುಖಾಂತರ ಸಕಾಲ ಮಿತ್ರರನ್ನು ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಸಕಾಲ ಮಿತ್ರ ಯೋಜನೆಗೆ ಆಸಕ್ತಿಯುಳ್ಳ ಶೈಕ್ಷಣಿಕ ಸಂಸ್ಥೆ ಅಥವಾ ಸರ್ಕಾರೇತರ ಸಂಸ್ಥೆ ಜಿಲ್ಲಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಸಕಾಲ ಸಮಾಲೋಚಕ ಲೋಹಿತ್ ಕುಮಾರ್ (ಮೊ.ನಂ: 7892375385) ಅನ್ನು ಸಂಪರ್ಕಿಸುವಂತೆ ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News