ವೀಕೆಂಡ್ ಕರ್ಫ್ಯೂ ಉಲ್ಲಂಘನೆ ಆರೋಪ: ಗೃಹ ಸಚಿವರ ಸ್ವಕ್ಷೇತ್ರದಲ್ಲೇ ಜಾತ್ರಾ ಕಾರ್ಯಕ್ರಮ
ತೀರ್ಥಹಳ್ಳಿ: ತಾಲೂಕಿನ ಅರಳಸುರುಳಿ ಗ್ರಾಮದ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಸುಬ್ರಹ್ಮಣ್ಯ ಷ್ರಷ್ಟಿ ಪ್ರಯುಕ್ತ ಜಾತ್ರಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಈ ಕುರಿತ ವೀಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತುದೆ.
ಗೃಹಸಚಿವರ ಸ್ವಕ್ಷೇತ್ರದ ಗ್ರಾಮ ಪಂಚಾಯತ್ ಅಧಿಕಾರಿಗಳು ಕೋವಿಡ್ ನಿಯಮವನ್ನು ಉಲ್ಲಂಘಿಸಿ ಜಾತ್ರಾ ಮಹೋತ್ಸವಕ್ಕೆ ಸಹಕರಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು, ರಾಜ್ಯ ಸರ್ಕಾರದ ಕೊರೋನ ನಿಯಮಗಳನ್ನು ಗೃಹ ಸಚಿವರ ಕ್ಷೇತ್ರದ ಅಧಿಕಾರಿಗಳು ಗಾಳಿಗೆ ತೂರಿ ಜಾಣ ಕುರುಡು ಪ್ರದರ್ಶಿಸುತ್ತಿದ್ದಾರೆ ಎಂದು ಸ್ಥಳೀಯರು ದೂರಿದ್ದಾರೆ.
ಈ ಜಾತ್ರಾ ಕಾರ್ಯಕ್ರಮದಲ್ಲಿ ಸಾವಿರಾರು ಭಕ್ತಾದಿಗಳು ಕೋವಿಡ್ ಮುಂಜಾಗೃತ ಕ್ರಮವಾಗಿ ಸಾಮಾಜಿಕ ಅಂತರ ಕಾಪಾಡದೇ ಮಾಸ್ಕ್ ಧರಿಸದೆ ಜಾತ್ರೆಯ ಖರೀದಿಯ ಭರಾಟೆಯಲ್ಲಿ ತಲ್ಲೀನರಾಗಿದ್ದರು. ಅರಳಸುರುಳಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸೋಂಕಿತರ ಇದ್ದರೂ ಕೂಡ ಬೇಜವಾಬ್ದಾರಿತನ ತೋರುತ್ತಿದ್ದಾರೆ ಎಂಬ ಆರೋಪ ವ್ಯಕ್ತವಾಗಿದೆ.