ಮೇಲಧಿಕಾರಿಗಳ ಸೂಚನೆ ಪಾಲಿಸುವಂತೆ ಸಿಬ್ಬಂದಿಗೆ ಸೂಚನೆ
Update: 2022-01-08 23:43 IST
ಬೆಂಗಳೂರು, ಜ.8: ರಾಜ್ಯದಲ್ಲಿ ಕೊರೋನ ಪ್ರಕರಣಗಳು ಮತ್ತು ಒಮೈಕ್ರಾನ್ ಪ್ರಕರಣಗಳು ಹೆಚ್ಚುತ್ತಿರುವುದರಿಂದ ಆರೋಗ್ಯ ಇಲಾಖೆಯ ಅಧಿಕಾರಿಗಳು ಸೇರಿದಂತೆ ಸಿಬ್ಬಂದಿಗಳು ಮೇಲಾಧಿಕಾರಿಗಳು ಸೂಚಿಸಿದ ಕೆಲಸವನ್ನು ಸಮರ್ಪಕವಾಗಿ ನಿರ್ವಹಿಸಬೇಕು ಎಂದು ಸುತ್ತೋಲೆ ಹೊರಡಿಸಲಾಗಿದೆ.
ಕೋವಿಡ್ ನಿಯಂತ್ರಣದಲ್ಲಿ ಆರೋಗ್ಯ ಇಲಾಖೆಯ ಪಾತ್ರ ಮುಖ್ಯವಾಗಿದೆ. ಹಾಗಾಗಿ ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಯಾವ ಕ್ಷಣದಲ್ಲೂ ಕಾರ್ವ ನಿರ್ವಹಿಸಲು ಸಿದ್ದರಿರಬೇಕು. ಯಾವುದೇ ಕಾರಣಕ್ಕೂ ಪೂರ್ವಾನುಮತಿ ಇಲ್ಲದೆ, ಕೇಂದ್ರ ಸ್ಥಾನವನ್ನು ಬಿಡುವಂತಿಲ್ಲ ಎಂದು ಆರೋಗ್ಯ ಇಲಾಖೆಯ ಆಯುಕ್ತರು ಸುತ್ತೋಲೆಯಲ್ಲಿ ಉಲ್ಲೇಖಿಸಿದ್ದಾರೆ.