ಮೂವರು ಐಪಿಎಸ್ ಅಧಿಕಾರಿಗಳ ವರ್ಗಾವಣೆ
Update: 2022-01-09 20:22 IST
ಬೆಂಗಳೂರು, ಜ.9: ರಾಜ್ಯ ಪೊಲೀಸ್ ಇಲಾಖೆಯ ಮೂವರು ಐಪಿಎಸ್ ಅಧಿಕಾರಿಗಳನ್ನು ವರ್ಗಾಯಿಸಿ ಸರಕಾರ ರವಿವಾರ ಆದೇಶ ಹೊರಡಿಸಿದೆ.
ನಗರದ ಪೂರ್ವ ವಿಭಾಗದ ಡಿಸಿಪಿ ಎಸ್.ಡಿ.ಶರಣಪ್ಪ ಅವರನ್ನು ಬೆಂಗಳೂರು ಅಪರಾಧ ವಿಭಾಗದ ಡಿಸಿಪಿಯಾಗಿ ವರ್ಗಾವಣೆಗೆ ಮಾಡಲಾಗಿದೆ.
ಅದೇ ರೀತಿ, ವೈಟ್ ಫೀಲ್ಡ್ ವಿಭಾಗದ ಡಿಸಿಪಿ ಡಿ.ದೇವರಾಜ್ ಅವರನ್ನು ಕೋಲಾರ ಜಿಲ್ಲೆಯ ಎಸ್ಪಿಯಾಗಿ ವರ್ಗಾವಣೆ ಮಾಡಲಾಗಿದೆ. ಇನ್ನೂ, ಡಾ.ಅನೂಪ್ ಶೆಟ್ಟಿ ಅವರನ್ನು ಕಮಾಂಡೆಂಟ್ ಕೆಎಸ್‍ಆರ್ಪಿ(ರಾಜ್ಯ ಮೀಸಲು ಪೊಲೀಸ್)ಯಿಂದ ಈಶಾನ್ಯ ವಿಭಾಗದ ಡಿಸಿಪಿಯಾಗಿ ವರ್ಗಾಯಿಸಲಾಗಿದೆ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.