×
Ad

ಮಂಡ್ಯ: ಯುವಕ ಆತ್ಮಹತ್ಯೆ

Update: 2022-01-09 21:10 IST

ಮಂಡ್ಯ, ಜ.9: ಉದ್ಯೋಗ ಕಳೆದುಕೊಂಡು ಖಿನ್ನತೆಗೊಳಗಾಗಿದ್ದ ಯುವಕನೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಸಾಹುಕಾರ ಚನ್ನಯ್ಯ ಬಡಾವಣೆಯಲ್ಲಿ ಶನಿವಾರ ತಡರಾತ್ರಿ ನಡೆದಿದೆ.

ಬಡಾವಣೆಯ ನಿವಾಸಿ ಸಂಪತ್ ಅವರ ಪುತ್ರ ಸಂತೋಷ್ ಆತ್ಮಹತ್ಯೆ ಮಾಡಿಕೊಂಡವರು. ಎಂಬಿಎ ಪದವೀಧರನಾದ ಸಂತೋಷ್ ಮೈಸೂರಿನ ಖಾಸಗಿ ಕಂಪನಿಯಲ್ಲಿ ಉದ್ಯೋಗ ಮಾಡುತ್ತಿದ್ದು, ಕೋವಿಡ್ 2ನೇ ಅಲೆಯಲ್ಲಿ ಕೆಲಸ ಕಳೆದುಕೊಂಡಿದ್ದರು ಎನ್ನಲಾಗಿದೆ.

ನಂತರ, ಕೆಲಸಕ್ಕಾಗಿ ಹುಡಕಾಟ ನಡೆಸಿ ಖಿನ್ನತೆಗೊಳಗಾಗಿದ್ದ ಎನ್ನಲಾಗಿದೆ. ವಿಷ ಸೇವಿಸಿ ತೀವ್ರ ಅಸ್ವಸ್ಥಗೊಂಡ ಈತನನ್ನು ಮನೆಯವರು ಜಿಲ್ಲಾಸ್ಪತ್ರೆಗೆ ಸೇರಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರೆ.

ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News