ಬಾಲಕಿಗೆ ಲೈಂಗಿಕ ದೌರ್ಜನ್ಯ: ಆರೋಪಿ ಬಂಧನ

Update: 2022-01-09 16:49 GMT

ಶಂಕರನಾರಾಯಣ, ಜ.9: ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿ ಗರ್ಭಿಣಿ ಯಾಗಿಸಿದ ಆರೋಪದಲ್ಲಿ ಯುವಕನೋರ್ವನನ್ನು ಶಂಕರನಾರಾಯಣ ಪೊಲೀಸರು ಪೊಕ್ಸೋ ಕಾಯಿದೆಯಡಿ ಬಂಧಿಸಿದ್ದಾರೆ.

ಯಡಮೊಗೆ ಗ್ರಾಮದ ಮಧುವನ ನಿವಾಸಿ ಶ್ರೀಕಂಠ(23) ಬಂಧಿತ ಆರೋಪಿ.

ಈತ ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ನಿರಂತರ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದನು. ಇದರ ಪರಿಣಾಮ ಆಕೆ ಗರ್ಭಿಣಿಯಾಗಿದ್ದಾಳೆ. ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಬಾಲಕಿಯನ್ನು ಕುಂದಾಪುರ ಸರಕಾರಿ ಆಸ್ಪತ್ರೆ ಯಲ್ಲಿ ಪರೀಕ್ಷಿಸಿದಾಗ ಈ ವಿಚಾರ ಬೆಳಕಿಗೆ ಬಂದಿದೆ ಎಂದು ಹೇಳಲಾಗಿದೆ. ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News