ಜ. 12ರಿಂದ ನೀಟ್-ಪಿಜಿ ಕೌನ್ಸೆಲಿಂಗ್ ಆರಂಭ: ಮನ್ಸುಖ್ ಮಾಂಡವಿಯಾ

Update: 2022-01-09 19:58 GMT

ಹೊಸದಿಲ್ಲಿ: 2021-22ರ ವೈದ್ಯಕೀಯ ಸ್ನಾತಕೋತ್ತರ ಕೋರ್ಸ್ ಗೆ ಸಂಬಂಧಿಸಿದ ಕೌನ್ಸೆಲಿಂಗ್ (ನೀಟ್-ಪಿಜಿ ಕೌನ್ಸೆಲಿಂಗ್) ಜನವರಿ 11ರಿಂದ ಆರಂಭವಾಗಲಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ರವಿವಾರ ಹೇಳಿದ್ದಾರೆ.

ಹೊಸ ಮೀಸಲಾತಿಗೆ ಅನುಮತಿ ನೀಡುವ ಮೂಲಕ ವೈದ್ಯಕೀಯ ಕಾಲೇಜುಗಳ ಪ್ರವೇಶದ ಕುರಿತ ಬಿಕ್ಕಟ್ಟನ್ನು ಸುಪ್ರೀಂ ಕೋರ್ಟ್ ಶುಕ್ರವಾರ ಅಂತ್ಯಗೊಳಿಸಿದ ಬಳಿಕ ಈ ಘೋಷಣೆ ಹೊರಬಿದ್ದಿದೆ.

‘‘ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ವೈದ್ಯಕೀಯ ಕೌನ್ಸೆಲಿಂಗ್ ಸಮಿತಿ 2022 ಜನವರಿ 12ರಿಂದ ನೀಟ್-ಪಿಜಿ ಕೌನ್ಸೆಲಿಂಗ್ ಆರಂಭಿಸಲಿದೆ. ಇದು ಕೊರೋನದ ವಿರುದ್ಧ ಹೋರಾಡಲು ದೇಶಕ್ಕೆ ಹೆಚ್ಚು ಶಕ್ತಿ ನೀಡಲಿದೆ. ಎಲ್ಲ ಅಭ್ಯರ್ಥಿಗಳಿಗೆ ನನ್ನ ಶುಭ ಹಾರೈಕೆ ’’ ಎಂದು ಸಚಿವರು ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

ನೀಟ್-ಪಿಜಿ ಪರೀಕ್ಷೆಯನ್ನು ಆರಂಭಿಸುವ ತುರ್ತು ಅಗತ್ಯತೆ ಇದೆ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಹೇಳಿತ್ತು.

ಈ ಕೋರ್ಸ್ ಗಳಿಗೆ ಸಂಬಂಧಿಸಿದಂತೆ 8 ಲಕ್ಷ ವಾರ್ಷಿಕ ಆದಾಯ ಮಿತಿಯಲ್ಲಿ ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ನೀಡಲಾದ ಮೀಸಲಾತಿ ಮೊದಲಿನಂತೆಯೇ ಇರಲಿದೆ ಎಂದು ಕೇಂದ್ರ ಸರಕಾರ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News