×
Ad

ಬಿಜೆಪಿ ತ್ಯಜಿಸಿ ಗೋವಾ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಮೈಕಲ್‌ ಲೋಬೋ

Update: 2022-01-10 13:03 IST
Photo: ANI

ಪಣಜಿ: ಗೋವಾ ಸಚಿವ ಮತ್ತು ಬಿಜೆಪಿ ಶಾಸಕ ಮೈಕೆಲ್ ಲೋಬೋ ಅವರು ಪ್ರಮೋದ್ ಸಾವಂತ್ ನೇತೃತ್ವದ ಸಚಿವಾಲಯಕ್ಕೆ ಮತ್ತು ಮುಂದಿನ ತಿಂಗಳು ನಡೆಯಲಿರುವ ರಾಜ್ಯ ಚುನಾವಣೆಗೆ ಮುನ್ನ ವಿಧಾನಸಭೆಯ ಸದಸ್ಯತ್ವಕ್ಕೆ ಸೋಮವಾರ ರಾಜೀನಾಮೆ ನೀಡಿದ್ದಾರೆ.

ಕಲಾಂಗುಟ್ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ಲೋಬೋ ಅವರು ಮುಖ್ಯಮಂತ್ರಿ ಕಚೇರಿ ಮತ್ತು ಗೋವಾ ವಿಧಾನಸಭಾ ಸ್ಪೀಕರ್‌ಗೆ ರಾಜೀನಾಮೆ ಸಲ್ಲಿಸಿದ್ದಾರೆ.

“ನಾನು ಎರಡೂ ಹುದ್ದೆಗಳಿಗೆ ರಾಜೀನಾಮೆ ನೀಡಿದ್ದೇನೆ. ಮುಂದೆ ಯಾವ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂಬುದನ್ನು ನಾನೇ ತೀರ್ಮಾನಿಸುತ್ತೇನೆ. ನಾನು ಬಿಜೆಪಿಗೆ ಕೂಡಾ ರಾಜೀನಾಮೆ ನೀಡಿದ್ದೇನೆ ಎಂದು ರಾಜ್ಯ ತ್ಯಾಜ್ಯ ನಿರ್ವಹಣಾ ವಿಭಾಗದ ಉಸ್ತುವಾರಿ ಲೋಬೋ ಸುದ್ದಿಗಾರರಿಗೆ ತಿಳಿಸಿದರು.

ಇನ್ನು ಕಾಂಗ್ರೆಸ್ ಸೇರುತ್ತೀರಾ? ಎಂಬ ಪ್ರಶ್ನೆಗೆ ಉತ್ತರಿಸಿದ ಲೋಬೊ ಅವರು ಇತರ ರಾಜಕೀಯ ಪಕ್ಷಗಳೊಂದಿಗೆ ಮಾತುಕತೆ ನಡೆಸುತ್ತಿದ್ದೇನೆ. ಕರಾವಳಿ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿಯಿಂದ ಜನರು ಅತೃಪ್ತರಾಗಿದ್ದಾರೆ ಎಂದು ಕಿಡಿಕಾರಿದರು.

"ಬಿಜೆಪಿ ಇನ್ನು ಮುಂದೆ ಸಾಮಾನ್ಯ ಜನರ ಪಕ್ಷವಲ್ಲ ಎಂದು ಮತದಾರರು ನನಗೆ ಹೇಳಿದ್ದಾರೆ" ಎಂದು ಅವರು ಹೇಳಿದರು, ಆದರೆ ತಳಮಟ್ಟದ ಕಾರ್ಯಕರ್ತರು ಪಕ್ಷದಿಂದ ಕಡೆಗಣಿಸಲ್ಪಟ್ಟಿದ್ದಾರೆ ಎಂದು ಅವರು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News