ಹನೂರು: ಶಾಲೆಯ ಬಿಸಿಯೂಟದಲ್ಲಿ ಹಲ್ಲಿ, 60ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

Update: 2022-01-10 13:58 GMT
ತಾಲೂಕು ಆಸ್ಪತ್ರೆಗೆ ಭೇಟಿ ನೀಡಿದ ಅಧಿಕಾರಿಗಳು 

ಹನೂರು: ತಾಲೂಕಿನ ವಡಕೆಹಳ್ಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಧ್ಯಾಹ್ನದ ವೇಳೆ ಹಲ್ಲಿ ಬಿದ್ದಿರುವ ಬಿಸಿಯೂಟ ಸೇವಿಸಿದ 60ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ನಡೆದಿದೆ. 

ತಾಲೂಕಿನ ವಡೆಕೆಹಳ್ಳ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ 1ರಿಂದ 8 ತರಗತಿಯವರಗೆ 170 ಮಕ್ಕಳು ವ್ಯಾಸಂಗ ಮಾಡುತ್ತಿದ್ದು, ಇಂದು ಶಾಲೆಗೆ 90 ಮಕ್ಕಳು ಶಾಲೆಗೆ ಹಾಜರಾಗಿದ್ದರು ಮಧ್ಯಾಹ್ನ ಎಂದಿನಂತೆ ಬಿಸಿಯೂಟ ಸೇವಿಸಿದ್ದಾರೆ. ಬಳಿಕ ಮಕ್ಕಳು ವಾಂತಿ ಮಾಡಿಕೊಂಡು ಅಸ್ವಸ್ಥಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

ತಕ್ಷಣ ಶಿಕ್ಷಕರು ತುರ್ತು ವಾಹನಕ್ಕೆ ಕರೆ ಮಾಡಿ ಹತ್ತಿರದ ಕೌದಳ್ಳಿ, ರಾಮಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ಅಸ್ವಸ್ಥಗೊಂಡಿದ್ದ ಮಕ್ಕಳಿಗೆ ಚಿಕಿತ್ಸೆ ಕೊಡಿಸಲಾಗಿದ್ದು, ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಶಾಲೆಯಲ್ಲಿ 90 ಕ್ಕೂ ಹೆಚ್ಚು ಮಕ್ಕಳು ವ್ಯಾಸಂಗ ಮಾಡುತ್ತಿದ್ದು 60 ಕ್ಕೂ ಹೆಚ್ಚು ಮಕ್ಕಳು ಬಿಸಿಯೂಟ ಸೇವಿಸಿದ್ದರು. ಇವರೆಲ್ಲ ವಾಂತಿ ಮಾಡಿಕೊಂಡ ಬಳಿಕ ಇತರೆ ಮಕ್ಕಳು ಊಟ ಸೇವಿಸಿಲ್ಲ. ವಿಷಯ ತಿಳಿದು ಸ್ಥಳಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಆರ್.ಸ್ವಾಮಿ ಭೇಟಿ ನೀಡಿ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲು ನೆರವಾದರು. ಉಳಿದಂತೆ ತಹಶೀಲ್ದಾರ್ ನಾಗರಾಜು, ವೈದ್ಯ ಡಾ.ರಾಜೇಶ್ ಅವರು ಕೂಡ ಸ್ಥಳಕ್ಕೆ ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.

ಮಧ್ಯಾಹ್ನ 60 ಕ್ಕೂ ಹೆಚ್ಚು ಮಕ್ಕಳು ಬಿಸಿಯೂಟ ಸೇವಿಸಿದ್ದು ಅಸ್ವಸ್ಥಗೊಂಡಿದ್ದ ಮಕ್ಕಳನ್ನು ಹತ್ತಿರದ ಕೌದಳ್ಳಿ ಸರ್ಕಾರಿ ಆಸ್ಪತ್ರೆಯಲ್ಲಿ 18 ಮಕ್ಕಳು ಹಾಗೂ ರಾಮಾಪುರ ಸರ್ಕಾರಿ ಆಸ್ಪತ್ರೆಯಲ್ಲಿ 52 ಮಕ್ಕಳನ್ನು ದಾಖಲು ಮಾಡಿ ಚಿಕಿತ್ಸೆ ಕೊಡಿಸಿ ಅವರುಗಳ ಮನೆಗಳಿಗೆ ಕಳುಹಿಸಲಾಗಿದೆ ಯಾವುದೇ ಮಕ್ಕಳು ತೊಂದರೆಯಾಗಿಲ್ಲ.

ಟಿ.ಆರ್ ಸ್ವಾಮಿ,  ಕ್ಷೇತ್ರ ಶಿಕ್ಷಣಾಧಿಕಾರಿಗಳು

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News