ಸಹಾಯಧನಕ್ಕೆ ಅವಧಿ ವಿಸ್ತರಣೆ
Update: 2022-01-10 19:43 IST
ಉಡುಪಿ, ಜ.10: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಸಾಮಾನ್ಯ, ವಿಶೇಷ ಘಟಕ ಮತ್ತು ಗಿರಿಜನ ಉಪಯೋಜನೆಯಡಿ, ಸಾಂಸ್ಕೃತಿಕ ಸಂಘ ಸಂಸ್ಥೆಗಳ ವಾರ್ಷಿಕ ಚಟುವಟಿಕೆಗಳಿಗೆ, ಅಸಂಘಟಿತ ಕಲಾವಿದರಿಗೆ ವಾದ್ಯ ಪರಿಕರ ಮತ್ತು ವೇಷಭೂಷಣ ಖರೀದಿಸಲು, ಶಿಲ್ಪ ಹಾಗೂ ಚಿತ್ರಕಲೆ ಕಲಾದರಿಗೆ ಕಲಾಕೃತಿಗಳ ಪ್ರದರ್ಶನ ಏರ್ಪಡಿಸಲು ಸಹಾಯಧನ ಕ್ಕಾಗಿ ಅರ್ಜಿ ಸಲ್ಲಿಸುವ ಅವಧಿಯನ್ನು ಜನವರಿ 15ರವರೆಗೆ ವಿಸ್ತರಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.